ರಂಗನಾಥ್ ದೊರೆಗೆ ಶಿಕ್ಷಕ ರತ್ನ ಪ್ರಶಸ್ತಿ.
ರಂಗನಾಥ್ ದೊರೆಗೆ ಶಿಕ್ಷಕ ರತ್ನ ಪ್ರಶಸ್ತಿ.
ಶಹಪುರ : ತಾಲೂಕಿನ ಮರಕಲ್ ಗ್ರಾಮದ ರಂಗನಾಥ್ ದೊರೆ ಅವರಿಗೆ ರಾಯಚೂರಿನ ಕಲಾ ಸಂಕುಲ ಸಂಸ್ಥೆ ವತಿಯಿಂದ ಕೊಡಮಾಡುವ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ ಪ್ರಕಟಣೆಗೆ ತಿಳಿಸಿದ್ದಾರೆ.
ಚಿತ್ತಾಪುರ ತಾಲೂಕಿನ ಮಹಾತ್ಮ ಗಾಂಧೀಜಿ ಪ್ರೌಢಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ, ಜೊತೆಗೆ ಸಾಹಿತಿಗಳಾಗಿ ಸಮಾಜಮುಖಿಯಾಗಿ ಸುಮಾರು 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಇವರ ಅಮೋಘ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಸಾಮಾಜಿಕ ಕಳಕಳಿ ಬದ್ಧತೆಯ ಜೊತೆಗೆ ಸಮಾಜಕ್ಕಾಗಿ ದುಡಿಯುತ್ತಿರುವ ರಂಗನಾಥ ದೊರೆಯವರಿಗೆ ಪ್ರಶಸ್ತಿ ಲಭಿಸಿದ್ದು ತುಂಬಾ ಸಂತೋಷ ತಂದಿದೆ ಎಂದು ಆಪ್ತ ಗೆಳೆಯರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಪ್ರಶಸ್ತಿಯನ್ನು ರಾಯಚೂರಿನ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಇದೇ ಸೆಪ್ಟಂಬರ್ 20 ರಂದು ಆಯೋಜಿಸಿದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

