ರಾವೂರನಲ್ಲಿ ಎಸ್ ಐ ಆರ್ ಕುರಿತು ವಿಶೇಷ ಜಾಗೃತಿ ಅಭಿಯಾನ
ರಾವೂರನಲ್ಲಿ ಎಸ್ ಐ ಆರ್ ಕುರಿತು ವಿಶೇಷ ಜಾಗೃತಿ ಅಭಿಯಾನ
18ವರ್ಷ ತುಂಬಿದ ಪ್ರತಿಯೊಬ್ಬ ಮತದಾರರು ಮತದಾರ ಪಟ್ಟಿಯಲ್ಲಿ ನಮೂನೆ 6 ತುಂಬಿ ನೊಂದಣಿ ಮಾಡಿಸಿಕೊಳ್ಳಬೇಕು. ಸಂವಿಧಾನದ ಈ ಹಕ್ಕನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ ಹೇಳಿದರು. ಅವರು ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ SIR ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಚುನಾವಣೆಗಳಲ್ಲಿ ಒಂದೊಂದು ಮಾತವು ನಿರ್ಣಾಯಕ. ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳಲು ಪಾರದರ್ಶಕ ಮತ್ತು ನಿಸ್ಪಕ್ಷಪಾತ ಚುನಾವಣೆ ಅತ್ಯಗತ್ಯ. ಆ ಹಿನ್ನಲೆಯಲ್ಲಿ ಭಾರತೀಯ ಚುನಾವಣೆ ಆಯೋಗವು ಜಾರಿಗೆ ತಂದಿರುವ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಮುಖವಾಗಿದೆ. ದೇಶದ ಯಾವೊಬ್ಬ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದು. SIR ಪ್ರಕ್ರಿಯೆ ಚುನಾವಣೆ ಪ್ರಕ್ರಿಯೆಯನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತದೆ. ದೇಶ ನನಗೇನು ಕೊಟ್ಟಿದೆ ಅನ್ನುವದಕ್ಕಿಂತ ದೇಶಕ್ಕೆ ನಾವೇನು ಕೊಡುತ್ತಿದ್ದೇವೆ ಎನ್ನುವುದು ಮುಖ್ಯ. ಅದೇ ರೀತಿ 18 ವರ್ಷ ತುಂಬಿದವರು ಮತದಾರರಾಗಳು ನೊಂದಣಿ ಮಾಡಿಕೊಂಡು ಮತದಾರರಾಗಬೇಕು. ಈ ಕುರಿತbಜಾಗೃತಿಯನ್ನು ನಾವೆಲ್ಲರೂ ಮೂಡಿಸಬೇಕಾಗಿದೆ ಎಂದು ಹೇಳಿದರು.
SIR ಕುರಿತು ಹಮ್ಮಿಕೊಂಡಿದ್ದ ಪ್ರಭಂಧ ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ವೈಷ್ಣವಿ, ಭಾಗ್ಯಶ್ರೀ, ದೇವಮ್ಮ, ಅಂಜಲಿ, ಮಲ್ಲಿಕಾರ್ಜುನ, ನಂದಿನಿ ಅವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ವೇದಿಕೆಯ ಮೇಲೆ ಅತಿಥಿಗಳಾಗಿ ತಾಲೂಕ ಗ್ರೇಡ್ -1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವಿoದ್ರ ರೆಡ್ಡಿ ದುಗನೂರ, ಗ್ರೇಡ್ -1 ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಮಣಿಸಿಂಗ್ ಚೌವ್ಹಾಣ ಇದ್ದರು. ಮುಖ್ಯಗುರು ವಿದ್ಯಾಧರ ಖಂಡಾಳ ಅಧ್ಯಕ್ಷತೆ ವಹಿಸಿದ್ದರು.
ELC ಸಂಯೋಜಕ ಸಿದ್ದಲಿಂಗ ಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಭುವನೇಶ್ವರಿ ಎಂ. ನಿರೂಪಿಸಿ ವಂದಿಸಿದರು.

