ಬಿಳವಾರ–ಪಡದಳ್ಳಿ ರಸ್ತೆ ಕಾಮಗಾರಿ ವಿಳಂಬ: ಶಾಲಾ ಮಕ್ಕಳು, ಸಾರ್ವಜನಿಕರಿಗೆ ತೊಂದರೆ

ಬಿಳವಾರ–ಪಡದಳ್ಳಿ ರಸ್ತೆ ಕಾಮಗಾರಿ ವಿಳಂಬ: ಶಾಲಾ ಮಕ್ಕಳು, ಸಾರ್ವಜನಿಕರಿಗೆ ತೊಂದರೆ

ಬಿಳವಾರ–ಪಡದಳ್ಳಿ ರಸ್ತೆ ಕಾಮಗಾರಿ ವಿಳಂಬ: ಶಾಲಾ ಮಕ್ಕಳು, ಸಾರ್ವಜನಿಕರಿಗೆ ತೊಂದರೆ

ಜೇವರ್ಗಿ: ಬಿಳವಾರದಿಂದ ಪಡದಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಸುಮಾರು ಆರು ತಿಂಗಳು ಕಳೆದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಅಯ್ಯಣಗೌಡ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಸ್ತೆ ಹದಗೆಟ್ಟಿರುವುದರಿಂದ ಶಾಲಾ ಮಕ್ಕಳು, ರೈತರು ಹಾಗೂ ಸಾರ್ವಜನಿಕರು ನಿತ್ಯ ಸಂಚಾರದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭಿಸದಿರುವ ಕುರಿತು ಪಿಡಬ್ಲ್ಯುಡಿ ಅಧಿಕಾರಿಗಳ ಆಮೆ ಗತಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯ ಅಯ್ಯಣಗೌಡ ಪಾಟೀಲ್ ಜಮಖಂಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಕಾಮಗಾರಿ ವಿಳಂಬಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಬಿಳವಾರ–ಪಡದಳ್ಳಿ ರಸ್ತೆ ಕಾಮಗಾರಿಯನ್ನು ಕೂಡಲೇ ಆರಂಭಿಸಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಯ ಮೇಲಧಿಕಾರಿಗಳಿಗೆ ದೂರು ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.