ಎನ್‌ಎಸ್‌ಎಸ್‌ನಿಂದ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ನರೇಗಲ್ ಸರ್ಕಾರಿ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸಂಸ್ಥಾಪನಾ ದಿನಾಚರಣೆ
ಎನ್‌ಎಸ್‌ಎಸ್‌ನಿಂದ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ
ನರೇಗಲ್ ಸರ್ಕಾರಿ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸಂಸ್ಥಾಪನಾ ದಿನಾಚರಣೆ
ಕಲ್ಯಾಣ ಕಹಳೆ ನರೇಗಲ್: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ (ಎನ್‌ಎಸ್‌ಎಸ್) ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ಯುವಜನತೆಯಲ್ಲಿ ರಾಷ್ಟ್ರೀಯತೆ, ಭಾವೈಕ್ಯತೆ, ಸಹಬಾಳ್ವೆ ಹಾಗೂ ನಾಯಕತ್ವ ಗುಣಗಳು ಮೈಗೂಡುತ್ತವೆ. ಇದು ಕೇವಲ ಸೇವಾ ಮನೋಭಾವ ಮಾತ್ರವಲ್ಲದೆ ವೈಜ್ಞಾನಿಕ ದೃಷ್ಟಿಕೋನವನ್ನೂ ರೂಪಿಸಲು ನೆರವಾಗುತ್ತದೆ" ಎಂದು ರಾಜ್ಯ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತ ಹಾಗೂ ಧಾರವಾಡದ ಸಸ್ಯಶಾಸ್ತ್ರ ಉಪನ್ಯಾಸಕ ಶಿವಯೋಗಿ ಹಾವೇರಿ ಅಭಿಪ್ರಾಯಪಟ್ಟರು
ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ 'ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಸ್ಥಾಪನಾ ದಿನಾಚರಣೆ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ನೈಜ ಬದುಕು ಹಾಗೂ ಜನರ ಸ್ಥಿತಿಗತಿಗಳನ್ನು ಹತ್ತಿರದಿಂದ ಅರಿತು, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಲು ಎನ್‌ಎಸ್‌ಎಸ್ ಅತ್ಯುತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಕಸ್ತೂರೆವ್ವ ದಳವಾಯಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಜಾಗೃತಗೊಳಿಸುವುದೇ ನೈಜ ಶಿಕ್ಷಣದ ಪರಮ ಗುರಿ. ವಿದ್ಯಾರ್ಥಿ ದೆಸೆಯಲ್ಲೇ ಶಿಸ್ತು, ಸಾಮಾಜಿಕ ಕಳಕಳಿ ಹಾಗೂ ಮುನ್ನಡೆಸುವ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಬದುಕಿನಲ್ಲಿ ಸಿಗುವ ಸುವರ್ಣಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮ ಇಂದಿನ ಸನ್ನಡತೆಯೇ ನಮ್ಮ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಎಂದರು.
ಎನ್‌ಎಸ್‌ಎಸ್ ಕಾರ್ಯಾಕ್ರಮಾಧಿಕಾರಿ ಸುನಂದಾ ಮುಂಜಿ ಮಾತನಾಡಿ, ಗ್ರಾಮೀಣ ಶಿಬಿರಗಳಿಗೆ ಭೇಟಿ ನೀಡಿದಾಗ ಹಳ್ಳಿಗಳ ವಾಸ್ತವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು. ಅಲ್ಲಿನ ಅನಕ್ಷರಸ್ಥರು ಮತ್ತು ಹಿಂದುಳಿದ ವರ್ಗದ ಜನರಿಗೆ ಅಕ್ಷರ ಜ್ಞಾನ, ಆರೋಗ್ಯ ಸಂರಕ್ಷಣೆ, ಸಂಸ್ಕಾರ ಹಾಗೂ ಪರಿಸರ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದೇ ಎನ್‌ಎಸ್‌ಎಸ್‌ನ ಪ್ರಮುಖ ಆಶಯವಾಗಿದೆ. ಶಿಕ್ಷಣ ತಂದುಕೊಡುವ ಆತ್ಮವಿಶ್ವಾಸವನ್ನು ಬಳಸಿಕೊಂಡು ಸಮಾಜಮುಖಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು
ಈ ವೇಳೆ ಎಸ್. ಎಸ್. ಸೂಡಿ, ಅನಿಲಕುಮಾರ, ಶಿವಪ್ಪ ಕುರಬರ, ವಿರೂಪಾಕ್ಷ ಆರ್, ವಿವೇಕಾನಂದ ಹಿರೇಮಠ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.
ನರೇಗಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ 'ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಸ್ಥಾಪನಾ ದಿನಾಚರಣೆ' ಕಾರ್ಯಕ್ರಮ ನಡೆಯಿತು
23ನರೇಗಲ್2: ನರೇಗಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ 'ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಸ್ಥಾಪನಾ ದಿನಾಚರಣೆ' ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು
23ನರೇಗಲ್3: ನರೇಗಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ 'ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಸ್ಥಾಪನಾ ದಿನಾಚರಣೆ' ಕಾರ್ಯಕ್ರಮದಲ್ಲಿ ರಾಜ್ಯ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ಶಿವಯೋಗಿ ಹಾವೇರಿ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ವರದಿಗಾರರು, ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ

