ಈಶಾನ್ಯ ಶಿಕ್ಷಕರ ಕ್ಷೇತ್ರ : ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ
ಈಶಾನ್ಯ ಶಿಕ್ಷಕರ ಕ್ಷೇತ್ರ : ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ
ನಾಗರಾಜ್ ದಂಡಾವತಿ ಶಹಾಬಾದ : - ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸೆಪ್ಟೆಂಬರ್ 29ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಇಕ್ರಂ ಶರೀಫ್ ರವರು ತಿಳಿಸಿದ್ದಾರೆ.
ಅರ್ಹ ಶಿಕ್ಷಕರು ನಮೂನೆ–19ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾಧಿಕಾರಿ ಕಚೇರಿ, ಕಲಬುರಗಿ ಮಹಾನಗರ ಪಾಲಿಕೆ ಕಚೇರಿ, ಕಲಬುರಗಿ ಹಾಗೂ ಸೇಡಂ ಉಪವಿಭಾಗಾಧಿಕಾರಿ ಕಚೇರಿ ಅಥವಾ ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳಲ್ಲಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

