ಸಿಎಂ ಕಪ್-೨೦೨೬: ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಸಿಎಂ ಕಪ್-೨೦೨೬: ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಸಿಎಂ ಕಪ್-೨೦೨೬: ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ವಿಭಾಗಮಟ್ಟದ ದಸರಾ ಕ್ರೀಡಾಕೂಟ-ಸಿಎಂ ಕಪ್-೨೦೨೬ರ ಈಜು ಸ್ಪರ್ಧೆಗಳಿಗೆ ಬುಧವಾರ ಚಾಲನೆ ನೀಡಲಾಯಿತು.

ಸಹಾಯಕ ಆಯುಕ್ತೆ ಕುಮಾರಿ ರಿತೀಕಾ ವರ್ಮಾ ಅವರು ಈಜು ಸ್ಪರ್ಧೆಗಳಿಗೆ ಚಾಲನೆ ನೀಡಿ, ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

ವಿಭಾಗಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಈಜು ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟುಗಳಾದ ಅದಿತಿ ಕಂಠಿ, ಸಂಜಯ ಬಾಣದ, ಪ್ರವೀಣ ಪುಣೆ, ರಾಜಕುಮಾಋ ಕೋರಳ್ಳಿ, ರಾಜು ಚವ್ಹಾಣ, ರೇಣುಕಾ ಬಿರಾದಾರ್, ಮಚೇಂದ್ರಸಿAಗ್ ಠಾಕೋರ, ಮುಜಾಮಿಲ್ ಕೆಂಬಾವಿ ಸೇರಿದಂತೆ ಅನೇಕ ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.