ಎಂ.ಎನ್. ದೇಸಾಯಿ ಕಾಲೇಜಿನ ಸ್ವಾಗತ ಸಮಾರಂಭ, ನೇತ್ರದಾನ ಶಿಬಿರ
ಎಂ.ಎನ್. ದೇಸಾಯಿ ಕಾಲೇಜಿನ ಸ್ವಾಗತ ಸಮಾರಂಭ, ನೇತ್ರದಾನ ಶಿಬಿರ
ಕಲಬುರಗಿ: ನಗರದ ಎಂ.ಎನ್. ದೇಸಾಯಿ ಪದವಿ ಮಹಾವಿದ್ಯಾಲಯದ ವತಿಯಿಂದ ಬಿ.ಎ., ಬಿ.ಕಾಂ ಹಾಗೂ ಬಿ.ಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭ ಹಾಗೂ ನೇತ್ರದಾನ ಶಿಬಿರವನ್ನು ರವಿವಾರ ನಗರದ ಕೊಠಾರಿ ಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ (SP) ಅಡೂರು ಶ್ರೀನಿವಾಸುಲು IPS ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ನೇತ್ರದಾನದಂತಹ ಮಾನವೀಯ ಕಾರ್ಯಗಳ ಮೂಲಕ ಇತರರ ಬದುಕಿಗೆ ಬೆಳಕಾಗುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ ಹಾಗೂ RCH ಅಧಿಕಾರಿ ಡಾ. ಸಿದ್ದು ಪಾಟೀಲ ಮಾತನಾಡಿದರು. ಹಿರಿಯ ಪತ್ರಕರ್ತ ಬಸವರಾಜ ಚಿನಿವಾರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಖ್ಯಾತ ನ್ಯಾಯವಾದಿ ರಾಘವೇಂದ್ರ ಕುಲಕರ್ಣಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಗಣಪತಿ ಪೂಜಾರಿ, PRED ಜೇವರ್ಗಿಯ JE ಶಂಕರಗೌಡ ಪಾಟೀಲ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ರಾಜ್ಯ ನಿರ್ದೇಶಕಿ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಸಾಹು ಗೌರವ ಉಪಸ್ಥಿತರಿದ್ದರು.
ಕಾಲೇಜಿನ ಗೌರವಾಧ್ಯಕ್ಷ ಚಂದ್ರಕಾಂತ ಎನ್. ದೇಸಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ಸಂದೀಪ ಎಸ್. ದೇಸಾಯಿ, ಕಾರ್ಯದರ್ಶಿ ಜಗನ್ನಾಥ ಎಸ್. ನಾಗೂರ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
“ನೇತ್ರದಾನ ಮಾಡಿ, ಅಂಧರ ಬಾಳಿಗೆ ಬೆಳಕಾಗಿ” ಎಂಬ ಸಂದೇಶದೊಂದಿಗೆ ನೇತ್ರದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

