ಕೋಡ್ಲಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಕನ್ನಡಿಗರ ಸೇನೆ ಸಂಘಟನೆಯ ಮನವಿ

ಕೋಡ್ಲಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು  ಕನ್ನಡಿಗರ ಸೇನೆ ಸಂಘಟನೆಯ ಮನವಿ

ಕೋಡ್ಲಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಲು ಕನ್ನಡಿಗರ ಸೇನೆ ಸಂಘಟನೆಯ ಮನವಿ

ಕೋಡ್ಲಿ: ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಬೇಕು ಹಾಗೂ ನೀರು ಸರಬರಾಜು ಮಾಡುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜೈ ಕನ್ನಡಿಗರ ಸೇನೆ ಸಂಘಟನೆಯ ವತಿಯಿಂದ ಕೋಡ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮದಲ್ಲಿ ನೀರಿನ ಸರಬರಾಜಿನಲ್ಲಿ ಉಂಟಾಗುತ್ತಿರುವ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಈ ಕುರಿತು ಕೂಡಲೇ ಅಗತ್ಯ ಕ್ರಮ ಕೈಗೊಂಡು ಸಮರ್ಪಕವಾಗಿ ನೀರು ಪೂರೈಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಅಲ್ಲದೆ, ನೀರು ಸರಬರಾಜು ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜೈ ಕನ್ನಡಿಗರ ಸೇನೆ ಸಂಘಟನೆಯ ತಾಲೂಕು ಅಧ್ಯಕ್ಷ ದಿಲೀಪಕುಮಾರ್ ಯಲಪಳ್ಳಿ, ಮಂಜುನಾಥ ಹಾದಿಮನಿ, ಸುರೇಶ ಚನ್ನೂರ್, ಮಹೇಶ ಸುಗಂಧಿ, ಭಾಗ್ಯವಂತ ಹಾಗೂ ಅಂಬರೀಷ್ ತೆಳಗಿನದೊಡ್ಡಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.