ಟೆಂಗಳಿಯಲ್ಲಿ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ

ಟೆಂಗಳಿಯಲ್ಲಿ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ

ಟೆಂಗಳಿಯಲ್ಲಿ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಸಮಾರಂಭಋ

ಕಾಳಗಿ: ತಾಲ್ಲೂಕಿನ ಟೆಂಗಳಿ ಗ್ರಾಮದಲ್ಲಿ ಅಕ್ಟೋಬರ್ 2ರಂದು ವಿಶ್ವೇಶ್ವರಯ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ, ಇಂಜಿನಿಯರ್ಸ್ ದಿನಾಚರಣೆ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಟೆಂಗಳಿ ವಲಯ ಘಟಕದ ಅಧ್ಯಕ್ಷ ಭೀಮಾಶಂಕರ ಅಂಕಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟೆಂಗಳಿ ಶಾಂತೇಶ್ವರ ಮಠದ ಪೂಜ್ಯ ಶ್ರೀ ಷ.ಬ್ರ. ಡಾ. ಶಾಂತ ಸೋಮನಾಥ ಶಿವಾಚಾರ್ಯರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಕಲಬುರಗಿ ವಿದ್ಯಾನಗರ ವೆಲ್‌ಫೇರ್ ಸೊಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಅಧ್ಯಕ್ಷತೆ ವಹಿಸಲಿದ್ದಾರೆ.

 ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಸೇವಂತಾ ಪಿ. ಚವ್ಹಾಣ, ಶ್ರೀಮತಿ ಸೈಯದ್ ಸಯಿದಾ ಬೇಗಂ, ಪ್ರಕಾಶ ಕೊಟ್ರೆ ಹಾಗೂ ಶರಣಬಸಪ್ಪ ಎಂ. ಧನೋಜಿ ಅವರನ್ನು ಅಭಿನಂದಿಸಿ ಗೌರವಿಸಲಾಗುವುದು.

ಕಾರ್ಯಕ್ರಮದಲ್ಲಿ ಭಾರತೀ ಜಿ. ನಿರೂಪಣೆ, ಗುಂಡಪ್ಪ ಪಟೇದ ಸ್ವಾಗತ, ಪರಮೇಶ್ವರ ಟೆಂಗಳಿ ವಂದನಾರ್ಪಣೆ ನೆರವೇರಿಸಲಿದ್ದು, ರಾಜು ಪಟೇದ ಹಾಗೂ ರಾ. ವಿವೇಕಾನಂದ ಬುಳ್ಳಾ ಕಾರ್ಯಕ್ರಮದ ನಿರ್ವಹಣೆ ಮಾಡಲಿದ್ದಾರೆ ಎಂದು ಹೇಳಿದರು