ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಕೃಷ್ಣ ನಾಯಕ ಅವರು ಅಧಿಕಾರ ಸ್ವೀಕಾರ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಕೃಷ್ಣ ನಾಯಕ ಅವರು ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಬಂಜಾರ ಲಂಬಾಣಿ ಸೇವಾ ಸಂಘದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಿ.ಬಿ. ನಾಯಕ ಅವರು ಕೃಷ್ಣ ನಾಯಕ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಬಂಜಾರ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಹಾಗೂ ವಕೀಲ ಕಮಲಾಕರ್ ವಿ. ರಾಠೋಡ, ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಚಂದು ರಾಠೋಡ, ಉಪಾಧ್ಯಕ್ಷ ಲಕ್ಷ್ಮಣ ಚವಾಣ್, ಲಾಲಪಾ ರಾಠೋಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

