ರಘು ಕೌಟಿಲ್ಯರಿಗೆ ಮಲ್ಲಿನಾಥ ಪಾಟೀಲ್ ಕಾಳಗಿ ಅವರ ನೇತೃತ್ವದಲ್ಲಿ ಸನ್ಮಾನ
ರಘು ಕೌಟಿಲ್ಯರಿಗೆ ಮಲ್ಲಿನಾಥ ಪಾಟೀಲ್ ಕಾಳಗಿ ಅವರ ನೇತೃತ್ವದಲ್ಲಿ ಸನ್ಮಾನ
ಕಲಬುರಗಿ: ಕಲಬುರಗಿ ಜಿಲ್ಲೆಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರನ್ನು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಕೋಶಾಧ್ಯಕ್ಷ ಮಲ್ಲಿನಾಥ ಪಾಟೀಲ್ ಕಾಳಗಿ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿ ಸುಂದರ ಡಿ. ಸಾಗರ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಮಹೇಂದ್ರ ಪೂಜಾರಿ, ಸತೀಶ್ ಸುಲೇಪೇಟ್, ಶ್ರೀಮಂತ ನಾಮ್ದಾರ್, ಸದ್ದಾಂ ವಜೀರಗಾಂವ್, ಮಲ್ಲು ಮರಗುತ್ತಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

