ಸೆರೆಬ್ರಲ್ ಪಾಲ್ಸಿ ಹೊಂದಿರುವವರಿಗೆ ಸಮಾನ ಅವಕಾಶ ಕಲ್ಪಿಸಿ

ಸೆರೆಬ್ರಲ್ ಪಾಲ್ಸಿ ಹೊಂದಿರುವವರಿಗೆ ಸಮಾನ ಅವಕಾಶ ಕಲ್ಪಿಸಿ

ಸೆರೆಬ್ರಲ್ ಪಾಲ್ಸಿ ಹೊಂದಿರುವವರಿಗೆ ಸಮಾನ ಅವಕಾಶ ಕಲ್ಪಿಸಿ

ಕಲಬುರಗಿ: ಭಾಗ್ಯೋದಯ ವೆಲ್ಫೇರ್ ಸೊಸೈಟಿ (BWS) ಕಚೇರಿಯಲ್ಲಿ ಸೆರೆಬ್ರಲ್ ಪಾಲ್ಸಿ ದಿನವನ್ನು ಜಾಗೃತಿ ಆಚರಿಸಲಾಯಿತು.

ಸೆರೆಬ್ರಲ್ ಪಾಲ್ಸಿ ಹೊಂದಿರುವ ಪ್ರತಿಯೊಬ್ಬರಿಗೂ ಗೌರವ, ಸಮಾನ ಅವಕಾಶ, ಶಿಕ್ಷಣ, ಸೂಕ್ತ ಚಿಕಿತ್ಸೆ ಹಾಗೂ ಸ್ವಾವಲಂಬನೆಯ ಹಕ್ಕು ಇದೆ. ಅವರಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ, ಸಮಾಜದ ಮುಖ್ಯವಾಹಿನಿಯಲ್ಲಿ ಸಮಾನವಾಗಿ ಭಾಗವಹಿಸಲು ಅವಕಾಶ ಕಲ್ಪಿಸಬೇಕು ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.

ವಿಕಲಚೇತನರ ಬಗ್ಗೆ ಸಮಾಜದಲ್ಲಿ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡಿ, ಒಳಗೊಳ್ಳುವಿಕೆ, ಸಮಾನತೆ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಬೆಳೆಸುವ ಅಗತ್ಯವಿದೆ ಎಂದು ಒತ್ತಿಹೇಳಲಾಯಿತು.

‘ಪ್ರತಿಯೊಂದು ಸಾಮರ್ಥ್ಯವೂ ವಿಶೇಷ. ಪ್ರತಿಯೊಬ್ಬರಿಗೂ ಸಮಾನ ಅವಕಾಶ’ ಎಂಬ ಸಂದೇಶದೊಂದಿಗೆ ದಿನಾಚರಣೆಯನ್ನು ಆಚರಿಸಲಾಯಿತು.