ಯಲ್ಲಮ್ಮ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ: ವಿಶೇಷ ಪೂಜೆ

ಯಲ್ಲಮ್ಮ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ: ವಿಶೇಷ ಪೂಜೆ

ಯಲ್ಲಮ್ಮ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ: ವಿಶೇಷ ಪೂಜೆ

ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ನಿಮಿತ್ತ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಹಾಗೂ ಭಾವಸರ್ ಕ್ಷತ್ರಿಯ ಸಮಾಜ ಪಾಮಿಡಿ ಫಂಡ್ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ಸನತ್ ದಾಸ್ ಮಹಾರಾಜ, ಶ್ರೀ ಕೇಶವ ದಾಸ್ ಮಹಾರಾಜ, ಟ್ರಸ್ಟ್ ಅಧ್ಯಕ್ಷ ಡಾ. ರಾಜು ಬಿ. ಜಾವಳಕರ್, ಕಾರ್ಯದರ್ಶಿ ಹಾಗೂ ಖಜಾಂಚಿ ಅನಿಲ್ ಎಂ. ಜಾವಳಕರ್ ಸೇರಿದಂತೆ ಟ್ರಸ್ಟ್‌ನ ಸದಸ್ಯರು, ರಾಜಕೀಯ ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು. ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.