ಅ. 25 ರಿಂದ ಹೇಮರೆಡ್ಡಿ ಎನ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಅ. 25 ರಿಂದ ಹೇಮರೆಡ್ಡಿ ಎನ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಅಡಿಯಲ್ಲಿ ರಾಯಚೂರಿನ ಯುವ ಚಿತ್ರಕಲಾವಿದ ಹೇಮರೆಡ್ಡಿ ಎನ್. ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಅ.25 ರಿಂದ 27, 2026 ರವರೆಗೆ ನಗರದ ಬಿಸಿಲು ಆರ್ಟ್ ಗ್ಯಾಲರಿ-01 ರಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಹಿರಿಯ ಚಿತ್ರಕಲಾವಿದ ಶಂಕರಪ್ಪ ನವಲಬಾ ಅ. 25, 2026 ರಂದು ಬೆಳಿಗ್ಗೆ 10:00 ಗಂಟೆಗೆ ಕಲಾ ಪ್ರದರ್ಶನವನ್ನು ಉದ್ಘಾಟಿಸುವರು. ಹಿರಿಯ ಚಿತ್ರಕಲಾವಿದ ಕೆ.ಎಸ್. ನಾಗುರೆ ಮುಖ್ಯ ಅತಿಥಿಯಾಗಿ ಬಾಗವಹಿಸಲಿದ್ದು, ಹಿರಿಯ ಚಿತ್ರಕಲಾವಿದ ಮತ್ತು ವ್ಹಿ.ಬಿ. ಬಿರಾದಾರ ಕಲಾ ಪ್ರತಿಷ್ಠಾನದ ಅಧ್ಯಕ್ಷ ವ್ಹಿ.ಬಿ. ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಹೇಮರೆಡ್ಡಿ ಎನ್. ಅವರು ರಚಿಸಿದ ಸುಮಾರು 30ಕ್ಕೂ ಹೆಚ್ಚು ನಿಸರ್ಗ ಚಿತ್ರಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ. ಆಂಧ್ರ ಪ್ರದೇಶ, ತಂಜಾವೂರು, ಕಲ್ಕತ್ತಾ, ನಾಗಪೂರ, ಬೆಂಗಳೂರು, ಮಂಗಳೂರು, ಮೈಸೂರು, ಕಲಬುರಗಿ, ಗದಗ, ಮೂಡುಬಿದರೆ ಮತ್ತು ಹೊಸಪೇಟೆ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ನಡೆದ 30ಕ್ಕು ಹೆಚ್ಚು ಪ್ರತಿಷ್ಠಿತ ಕಲಾ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ.
20ಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟç ಮಟ್ಟದ ಕಲಾಶಿಬಿರಗಳಲ್ಲಿ ಭಾಗವಹಿಸಿದ್ದಾರೆ. ನಾಲ್ಕು ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳನ್ನು ಏರ್ಪಡಿಸಿದ್ದಾರೆ. ಒಂಬತ್ತಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟç ಮಟ್ಟದ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಅ.25 ರಿಂದ ಅ. 27, 2026 ರವರೆಗೆ ಬೆಳಿಗ್ಗೆ 10:00 ಗಂಟೆಯಿAದ ಸಾಯಂಕಾಲ 6:00 ಗಂಟೆವರೆಗೆ ಕಲಾ ಪ್ರದರ್ಶನವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.

