ಅನಿರುದ್ಧ ವಾಡೇಕರ್ ಔರಾದ(ಬಿ) ಬಿಜೆಪಿ ನೂತನ ಅಧ್ಯಕ್ಷ

ಅನಿರುದ್ಧ ವಾಡೇಕರ್ ಔರಾದ(ಬಿ) ಬಿಜೆಪಿ ನೂತನ ಅಧ್ಯಕ್ಷ

ಅನಿರುದ್ಧ ವಾಡೇಕರ್ ಔರಾದ(ಬಿ) ಬಿಜೆಪಿ ನೂತನ ಅಧ್ಯಕ್ಷ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರನ್ನಾಗಿ ಬೆಳಕೋಣಿ(ಭೋ) ಗ್ರಾಮದ ಅನಿರುದ್ಧ ವಾಡೇಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ಅ. 24ರಂದು ಔರಾದ(ಬಿ) ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವರ ಹೆಸರನ್ನು ಘೋಷಿಸಲಾಯಿತು.

ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾದ ರಾಜಶೇಖರ ನಾಗಮೂರ್ತಿ ಅವರು ಅನಿರುದ್ಧ ವಾಡೇಕರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.

ಅನಿರುದ್ಧ ವಾಡೇಕರ್ ಮೂಲತಃ ವಕೀಲರಾಗಿದ್ದು, ಪಕ್ಷದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಹಿಂದೆ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವವಿದೆ. ಪಕ್ಷ ವಹಿಸಿದ ಜವಾಬ್ದಾರಿಗಳನ್ನು ವಹಿಸಿದ್ಸಾರೆ.

ಕಾರ್ಯಕ್ರಮವನ್ನು ಉದ್ಘಾಟಿಸಿದ ಔರಾದ(ಬಿ) ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಮಾತನಾಡಿ, ಮಂಡಲ ಅಧ್ಯಕ್ಷ ಸ್ಥಾನ ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ. ಪಕ್ಷವನ್ನು ಬಲಪಡಿಸುವುದರ ಜೊತೆಗೆ, ಶಕ್ತಿಶಾಲಿ ಭಾರತ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ದೇಶದ ಪ್ರಗತಿಯ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜವಾಬ್ದಾರಿಯನ್ನು ಕೇವಲ ಪಕ್ಷದ ಕೆಲಸವೆಂದು ಭಾವಿಸದೆ, ದೇಶದ ಸೇವೆ ಎಂದು ಪರಿಗಣಿಸಬೇಕು. ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ಮೀಸಲಿಟ್ಟು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ನಿಕಟಪೂರ್ವ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಪಕ್ಷದ ಸಂಘಟನೆಗಾಗಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಹಗಲಿರುಳೆನ್ನದೇ ದುಡಿದಿದ್ದಾರೆ. ಅವರ ಸೇವೆ ಸದಾ ಸ್ಮರಣೀಯ. ನೂತನ ಅಧ್ಯಕ್ಷರು ಕೂಡ ಇವರ ಸಹಕಾರದೊಂದಿಗೆ ಕೆಲಸ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ದರಾದ ಸೋಮನಾಥ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿರಣ ಪಾಟೀಲ, ಪೀರಪ್ಪ ಔರಾದೆ ಅವರು ಪಕ್ಷದ ಸಿದ್ಧಾಂತ ಮತ್ತು ಅಧ್ಯಕ್ಷರ ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ನಿಕಟಪೂರ್ವ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಅವರು ಮಾತನಾಡಿ, ಪಕ್ಷ ಸಂಘಟನೆಗೆ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸುಭಾಷ ಬಿರಾದಾರ, ಚಂದ್ರಶೇಖರ ಪಾಟೀಲ, ಶಿವರಾಜ ಅಲ್ಮಾಜೆ, ರಾಜಕುಮಾರ ಪಾಟೀಲ, ನಿಲೇಶ ರಕ್ಣ್ಯಾಳೆ, ವಸಂತ ಬಿರಾದಾರ, ಬಸವರಾಜ ಪಾಟೀಲ, ಸತೀಷ ಬಿರಾದಾರ, ಧೊಂಡಿಬಾ ನರೋಟೆ, ರಾಮಶೆಟ್ಟಿ ಪನ್ನಾಳೆ, ಶಿವಾಜಿರಾವ ಪಾಟೀಲ ಮುಂಗನಾಳ ಸೇರಿದಂತೆ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಸೇರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.