ಸಂಗೀತ ಮನಸ್ಸಿಗೆ ನೆಮ್ಮದಿ, ಸಂತೋಷ ನೀಡುತ್ತದೆ: ಶಾಸಕ ಅಲ್ಲಮಪ್ರಭು ಪಾಟೀಲ

ಸಂಗೀತ ಮನಸ್ಸಿಗೆ ನೆಮ್ಮದಿ, ಸಂತೋಷ ನೀಡುತ್ತದೆ: ಶಾಸಕ ಅಲ್ಲಮಪ್ರಭು ಪಾಟೀಲ

ಸಂಗೀತ ಮನಸ್ಸಿಗೆ ನೆಮ್ಮದಿ, ಸಂತೋಷ ನೀಡುತ್ತದೆ: ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ‘ಸಂಗೀತವೇ ಜೀವನ, ಗಾನವೇ ಆನಂದ’ ಎಂಬ ಧ್ಯೇಯದೊಂದಿಗೆ ನಂದಿನಿ ಸ್ವಾಮಿ ಮ್ಯೂಸಿಕಲ್ ಗ್ರೂಪ್ ಹಾಗೂ ನಂದಿನಿ ಸ್ವಾಮಿ ಕರೋಕೆ ಸ್ಟುಡಿಯೊ ವತಿಯಿಂದ ಭಾನುವಾರ ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಕರೋಕೆ ಗೀತ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು, ಸಂಗೀತವು ಜನರನ್ನು ಬೆಸೆಯುವ ಶಕ್ತಿಯನ್ನು ಹೊಂದಿದ್ದು, ಮನಸ್ಸಿಗೆ ನೆಮ್ಮದಿ ಮತ್ತು ಸಂತೋಷವನ್ನು ನೀಡುತ್ತದೆ. ಇಂತಹ ಗೀತ ಗಾಯನ ಕಾರ್ಯಕ್ರಮಗಳು ಸ್ಥಳೀಯ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಕಲಾವಿದರು ಸುಮಧುರ ಗೀತೆಗಳನ್ನು ಹಾಡಿ ಸಂಗೀತಾಸಕ್ತರನ್ನು ರಂಜಿಸಿದರು. ಇದೇ ಸಂದರ್ಭದಲ್ಲಿ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು.

ಆಂದೋಲದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಆಯೋಜಕ ಹಾಗೂ ಹೈಕೋರ್ಟ್ ನ್ಯಾಯವಾದಿ ಜಯಾನಂದಯ್ಯ ಸ್ವಾಮಿ, ಕಾಂಗ್ರೆಸ್ ಮುಖಂಡರಾದ ನೀಲಕಂಠ ಮುಲಗೆ, ಖಲೀಲ್ ಖಾನ್ ಸಾಹೇಬ್, ಸಿವಿಲ್ ಎಂಜಿನಿಯರ್ ಅನಿಲಕುಮಾರ ಎಸ್. ಗಂಗಾನಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಶಿವರಾಜ ಅಂಡಗಿ, ಹಿರಿಯ ನ್ಯಾಯವಾದಿ ವಿನೋದಕುಮಾರ ಜನವೇರಿ ಹಾಗೂ ಬಿಜೆಪಿ ಮುಖಂಡ ರೇವಣಸಿದ್ಧಪ್ಪ ಭೂಸನೂರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.