ನಮ್ಮ ಕರ್ನಾಟಕ ಸೇನೆಗೆ ನೂತನ ಪದಾಧಿಕಾರಿಗಳ ನೇಮಕ
ನಮ್ಮ ಕರ್ನಾಟಕ ಸೇನೆಗೆ ನೂತನ ಪದಾಧಿಕಾರಿಗಳ ನೇಮಕ
ಕಲಬುರಗಿ: ನಾಡು, ನುಡಿ, ನೆಲ, ಜಲ, ಭಾಷೆ ಹಾಗೂ ಗಡಿಯ ರಕ್ಷಣೆಗಾಗಿ ಕಂಕಣಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕರ್ನಾಟಕ ಸೇನೆಯ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಯಿತು.
ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಅವರ ಸಾರಥ್ಯದಲ್ಲಿ, ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಾಖಾಪುರ ಅವರ ಮಾರ್ಗದರ್ಶನದಲ್ಲಿ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ರುಕ್ಮಯ್ಯ ಗುತ್ತೇದಾರ, ಮಹಿಳಾ ಜಿಲ್ಲಾಧ್ಯಕ್ಷೆ ನಿರ್ಮಲ ತಳವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಮಯೂರ ಮತ್ತು ನಗರ ಘಟಕದ ಅಧ್ಯಕ್ಷ ಸುರೇಶ ಹೊಸಮನಿ ಅವರ ನೇತೃತ್ವದಲ್ಲಿ ಈ ನೇಮಕಾತಿ ನಡೆಯಿತು.
ಈ ಸಂದರ್ಭದಲ್ಲಿ ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಯಶ್ರೀ ಜಗದೀಶ ಪಾಟೀಲ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ ತಳವಾರ, ಆಟೋ ಘಟಕದ ಜಿಲ್ಲಾಧ್ಯಕ್ಷರಾಗಿ ಶಾಮರಾವ ರೇವೂರ, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಪವನ್ ಕುಮಾರ ಹಾಗೂ ಉಪಾಧ್ಯಕ್ಷರಾಗಿ ಸಿದ್ದು ಅವರನ್ನು ನೇಮಕ ಮಾಡಲಾಯಿತು.
ಇದಲ್ಲದೆ, ಹಲವು ಕಾರ್ಯಕರ್ತರು ನಮ್ಮ ಕರ್ನಾಟಕ ಸೇನೆಗೆ ಸೇರ್ಪಡೆಯಾದರು.
ನಾಡು, ನುಡಿ, ನೆಲ, ಜಲ ಮತ್ತು ಕನ್ನಡ ಭಾಷೆಯ ರಕ್ಷಣೆಗಾಗಿ ಸಂಘಟನೆಯನ್ನು ಬಲಪಡಿಸಿ, ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಮಯೂರ ತಿಳಿಸಿದ್ದಾರೆ.

