ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ  ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕಲಬುರಗಿ: ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ನಗರದ ರಾಮ ಮಂದಿರ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

 ಜಿಲ್ಲಾಧಿಕಾರಿ ಇಕ್ರಂ ಸರೀಫ್ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಜಯಂತಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ನಗರ ಪೊಲೀಸ್ ಆಯುಕ್ತ ಡಾ. ಶರಣಬಸಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ ದೊಡ್ಡಮನಿ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಲ್ಲಿನಾಥ, ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ಹುಳಕರ್ ಹಾಗೂ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಗಿರಿಮಲ್ಲಪ್ಪ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರಕಾಂತ ದಶರಥ ತಳವಾರ, ಜಿಲ್ಲಾ ಕಾರ್ಯದರ್ಶಿ ರಾಜೇಂದ್ರ ರಾಜವಾಳ, ಜಿಲ್ಲಾ ಉಪಾಧ್ಯಕ್ಷ ಭೀಮಾಶಂಕರ ಅಂಕಲಗಿ, ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ ತುಂಬಗಿ, ಅಫಜಲಪುರ ತಾಲ್ಲೂಕು ಘಟಕದ ಅಧ್ಯಕ್ಷ ಗುರುನಾಥ ಹಾವನೂರ, ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ರಾಜ್ಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ಬಸವರಾಜ ಗುಂಡಲಗೇರಿ, ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ಅಧ್ಯಕ್ಷ ಸಂತೋಷ ತಳವಾರ, ಕೀರಣಗಿ ಗ್ರಾಮ ಘಟಕದ ಅಧ್ಯಕ್ಷ ಶಿವಶರಣಪ್ಪ ಚನ್ನೂರ, ಕರ್ನಾಟಕ ಯುವಶಕ್ತಿ ರೈತರ ಮಕ್ಕಳ ಮಹಾಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷ ಅವ್ವಣ್ಣ ಪಾಟೀಲ, ಸುನಿತಾ ತಳವಾರ, ರಮೇಶ ನಾಟೀಕಾರ, ವಿಠ್ಠಲ್ ತಳವಾರ್, ರಾಮು ಉಮ್ಮರಗಿ, ಪ್ರವೀಣ ತೆಗ್ಗೆಳ್ಳಿ, ಶರಣು ಹಾಗರಗುಂಡಗಿ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಪಾಲ್ಗೊಂಡಿದ್ದರು.