ಕನ್ನಡ ರಾಜ್ಯೋತ್ಸವದೊಳಗೆ ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಿರಿ: ಡಾ. ಶ್ರೀ ಮಂಜು ಕುಸನೂರ
ಕನ್ನಡ ರಾಜ್ಯೋತ್ಸವದೊಳಗೆ ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಿರಿ: ಡಾ. ಶ್ರೀ ಮಂಜು ಕುಸನೂರ
ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ವಾಪಸ್ ಪಡೆಯಬೇಕು ಎಂದು ಕರವೇ ಜಿಲ್ಲಾ ಗೌರವಾಧ್ಯಕ್ಷ ಡಾ. ಶ್ರೀ ಮಂಜು ಕುಸನೂರ ಆಗ್ರಹ.
ಕನ್ನಡ ನೆಲ, ಜಲ ಹಾಗೂ ಭಾಷೆಯ ಉಳಿವಿಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಕನ್ನಡ ಪರ ಹೋರಾಟಗಳಲ್ಲಿ ಭಾಗವಹಿಸಿ, ವಿವಿಧ ಪ್ರಕರಣಗಳನ್ನು ಎದುರಿಸುತ್ತಿರುವ ಎಲ್ಲಾ ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಕನ್ನಡ ರಾಜ್ಯೋತ್ಸವದೊಳಗೆ ರಾಜ್ಯ ಸರ್ಕಾರ ಅಧಿಕೃತವಾಗಿ ವಾಪಸ್ ಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಜಿಲ್ಲಾ ಗೌರವಾಧ್ಯಕ್ಷರಾದ ಡಾ. ಶ್ರೀ ಮಂಜು ಕುಸನೂರ ಅವರು ಆಗ್ರಹಿಸಿದ್ದಾರೆ.
ಕನ್ನಡ ಭಾಷೆ, ನೆಲ, ಜಲ ಹಾಗೂ ಕನ್ನಡಿಗರ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಿದ ಕನ್ನಡ ಹೋರಾಟಗಾರರು ಇಂದಿಗೂ ವಿವಿಧ ಮೊಕದ್ದಮೆಗಳನ್ನು ಎದುರಿಸುತ್ತಿರುವುದು ವಿಷಾದನೀಯ. ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಹೋರಾಡಿದವರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ರಾಜ್ಯ ಸರ್ಕಾರ ಕನ್ನಡ ಹೋರಾಟಗಾರರಿಗೆ ನ್ಯಾಯ ಒದಗಿಸಬೇಕು.
ಕನ್ನಡ ರಾಜ್ಯೋತ್ಸವವು ಕನ್ನಡಿಗರ ಸ್ವಾಭಿಮಾನ, ಏಕತೆ ಹಾಗೂ ಕನ್ನಡಪರ ಹೋರಾಟದ ಸಂಕೇತವಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯೋತ್ಸವದ ಸಂಭ್ರಮದೊಳಗೆ ಕನ್ನಡ ಹೋರಾಟಗಾರರ ಮೇಲಿನ ಎಲ್ಲಾ ಅರ್ಹ ಪ್ರಕರಣಗಳನ್ನು ಅಧಿಕೃತವಾಗಿ ವಾಪಸ್ ಪಡೆಯುವ ಮೂಲಕ ಸರ್ಕಾರ ಕನ್ನಡಪರ ಕಾಳಜಿಯನ್ನು ಪ್ರದರ್ಶಿಸಬೇಕು ಎಂದು ಡಾ. ಶ್ರೀ ಮಂಜು ಕುಸನೂರ ಅವರು ಒತ್ತಾಯಿಸಿದ್ದಾರೆ

