ಗದಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಗದಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಗದಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಗದಗ-ಬೆಟಗೇರಿ ನಗರಸಭೆ ವತಿಯಿಂದ ಸೋಮವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಸೇರಿದಂತೆ ವಿವಿಧ ಇಲಾಕಜೆ ಅಧಿಕಾರಿಗಳು ಹಾಗೂ ಸಮಾಜದ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ