ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಚಕ್ರ ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ನರೇಗಲ್: ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಹಾಗೂ ಅನ್ನದಾನ ವಿಜಯ ಬಾಲಕರ ಪ್ರೌಢಶಾಲೆಯ 7ನೇ ತರಗತಿ ವಿದ್ಯಾರ್ಥಿ ಅನಿಕೇತ್ ದುರಗಪ್ಪ ಹರಿಜನ ಇವರು ಗದಗ ನಗರದ ಜೆ. ಟಿ. ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ 14 ವರ್ಷದೊಳಗಿನ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ಎಂ. ಬಿ. ಸಜ್ಜನರ ಪ್ರಕಟಣೆಯಲ್ಲಿ ತಿಳಿಸಿದರು.
ವರದಿ ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಜಿಲ್ಲಾ ವರದಿಗಾರರು

