ಡಿ. 7ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ

ಡಿ. 7ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ

ಡಿ. 7ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7ರಿಂದ 10 ದಿನಗಳ ಕಾಲ ನಡೆಸಲು ಉದ್ದೇಶಿಸಲಾಗಿದೆ.

ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದಂತೆ, 2026ರ ಡಿಸೆಂಬರ್ 7ರಂದು ಅಧಿವೇಶನ ಆರಂಭಿಸಲು ಸಂಭಾವ್ಯ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅಧಿವೇಶನದ ಸುಗಮ ನಿರ್ವಹಣೆಗಾಗಿ ಅಗತ್ಯವಿರುವ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕೃತ ಪತ್ರದಲ್ಲಿ ತಿಳಿಸಲಾಗಿದೆ.