ವಾಡಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಕಾರ್ಯಕರ್ತರು ಮನವಿ
ವಾಡಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಕಾರ್ಯಕರ್ತರು ಮನವಿ
ವಾಡಿ: ಪಟ್ಟಣದಲ್ಲಿ ದಿನೇ ದಿನೇ ಹದಗೆಡುತ್ತಿರುವ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಅವರು ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದಾದ್ಯಂತ 3-4 ದಿನಗಳಿಗೊಮ್ಮೆ ಅಶುದ್ಧ ನೀರು ಪೂರೈಕೆಯಾಗುತ್ತಿದ್ದು, ಪ್ರತಿದಿನ ಶುದ್ಧ ಕುಡಿಯುವ ನೀರು ಒದಗಿಸಬೇಕು.
ಪುರಸಭೆಯ ವಿವಿಧ ಯೋಜನೆಗಳ ದುರ್ಬಳಕೆಗಳನ್ನು ತಕ್ಷಣ ತಡೆಯಬೇಕು.
ಸಾರ್ವಜನಿಕ ಶೌಚಾಲಯ, ಬಸ್ ನಿಲ್ದಾಣ, ಪ್ರತ್ಯೇಕ ತರಕಾರಿ ಮತ್ತು ಮಾಂಸದ ಮಾರುಕಟ್ಟೆ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಬೇಕು.
ಕಳೆದ 8-10 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಎಪಿಎಂಸಿ ಮಾರುಕಟ್ಟೆಯನ್ನು ತಕ್ಷಣ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು.
ತ್ಯಾಜ್ಯ ಸಂಸ್ಕರಣಾ ಘಟಕದ ಸೂಕ್ತ ನಿರ್ವಹಣೆ, ಪರಿಸರ ಮಾಲಿನ್ಯ ತಡೆಗೆ ಪ್ರತಿ 3 ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣೆ ಕೈಗೊಳ್ಳಬೇಕೆಂದು,
ಪಟ್ಟಣದ ಜನರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರದ ಮೂಲಕ ಒತ್ತಾಯಿದ್ದಾರೆ.

