ಸಚಿವ ಯು.ಟಿ. ಖಾದರ್ ಅವರಿಂದ ಆಸ್ಪತ್ರೆ ಲೋಕಾರ್ಪಣೆ
ಕಲಬುರಗಿಯಲ್ಲಿ 200 ಹಾಸಿಗೆಗಳ ಎನ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ
ಸಚಿವ ಯು.ಟಿ. ಖಾದರ್ ಅವರಿಂದ ಆಸ್ಪತ್ರೆ ಲೋಕಾರ್ಪಣೆ; ಕಲ್ಯಾಣ ಕರ್ನಾಟಕದ ಆರೋಗ್ಯ ಸೇವೆಗೆ ಹೊಸ ಬಲ
ಕಲಬುರಗಿ: ಕಲ್ಯಾಣ ಕರ್ನಾಟಕದ ಆರೋಗ್ಯ ಸೇವಾ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ ನಗರದ ಝಫರಾಬಾದ್ ಕ್ರಾಸ್ನ ರಿಂಗ್ ರೋಡ್ನಲ್ಲಿ ನೂತನವಾಗಿ ಆರಂಭಗೊಂಡಿರುವ 200 ಹಾಸಿಗೆಗಳ ಸಾಮರ್ಥ್ಯದ ಎನ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ವ್ಯವಹಾರ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಅವರು ಬುಧವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್, ಸಾರ್ವಜನಿಕರಿಗೆ ಆಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವುದು ಅತ್ಯಂತ ಅಗತ್ಯವಾಗಿದೆ. ಕಲಬುರಗಿಯಲ್ಲಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಿರುವುದರಿಂದ ಕಲ್ಯಾಣ ಕರ್ನಾಟಕದ ಜನರಿಗೆ ಉತ್ತಮ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಆಸ್ಪತ್ರೆಯ ಅಧ್ಯಕ್ಷ ಡಾ. ಆರಿಫ್ ರಜಾ ಅಹ್ಮದ್ ಮಾತನಾಡಿ, ಎನ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು, ಸುಧಾರಿತ ತಂತ್ರಜ್ಞಾನ ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ಮೂಲಕ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸಲು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಕಲಬುರಗಿ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ನೀಡುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ, ಹಾಫಿಜ್ ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಸಾಹೇಬ್, ಶೈಖ್ ಶಾಹ್ ಅಫ್ಜಲುದ್ದೀನ್ ಜುನೈದಿ ಅಲಿಯಾಸ್ ಸಿರಾಜ್ ಬಾಬಾ, ಸಯ್ಯದ್ ಮುಹಮ್ಮದ್ ಯದುಲ್ಲಾ ಹುಸೈನಿ ಅಲಿಯಾಸ್ ನಿಜಾಮ್ ಬಾಬಾ, ಸಯ್ಯದ್ ಮುಹಮ್ಮದ್ ತನ್ವೀರ್ ಹಾಶ್ಮಿ, ಹಜರತ್ ಖ್ವಾಜಾ ಜಿಯಾ-ಉಲ್-ಹಸನ್ ಜಾಗೀರ್ಡಾರ್, ಶ್ರೀ ಶ್ರೀ ಶ್ರೀ ಶಡಕ್ಷರಿ ಶಿವಯೋಗಿ ಮಹಾಸ್ವಾಮೀಜಿ, ಶ್ರೀ ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ರೇವಣಸಿದ್ಧ ಶಿವಾಚಾರ್ಯರು ಹಾಗೂ ಪೂಜ್ಯ ಡಾ. ಚನ್ನವೀರ ಶಿವಾಚಾರ್ಯರು ಸೇರಿದಂತೆ ವಿವಿಧ ಧಾರ್ಮಿಕ ಗುರುಗಳ ಆಶೀರ್ವಾದ ಪಡೆಯಲಾಯಿತು.
ಸಮಾರಂಭದಲ್ಲಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ, ಮಾಜಿ ಸಚಿವ ಹಾಗೂ ಶಾಸಕ ರಹೀಂ ಖಾನ್, ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ್ ಗುತೇದಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕಿರಣ ದೇಶಮುಖ್,
ಕೆ.ಯು.ಡಿ.ಎ. ಅಧ್ಯಕ್ಷ ಮಜರ್ ಆಲಂ ಖಾನ್, ಮಹಾನಗರ ಪಾಲಿಕೆ ಮೇಯರ್ ಶೇಖ್ ಅಜ್ಮಲ್ ಅಹ್ಮದ್ ಗೋಲಾ, ಮಾಜಿ ಮೇಯರ್ ಸಯ್ಯದ್ ಅಹ್ಮದ್, ಉಪಮೇಯರ್ ಫರ್ಹಾನಾಜ್ ಖುಸ್ರೋ ಜಾಗೀರ್ಡಾರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ್, ನಿಗಮದ ಮಾಜಿ ಅಧ್ಯಕ್ಷ ಹಾಗೂ ಜಮಾತ್-ಎ-ಬಾಗ್ಬಾನ್ ಅಧ್ಯಕ್ಷ ಇಲಿಯಾಸ್ ಸೇಠ್ ಭಾಗವಾನ್, ಡಾ. ಶರಣ ಬಸಪ್ಪ ಕ್ಯಾತನಾಳ, ಶ್ರೀಮತಿ ಶ್ವೇತಾ, ಲಾಲ್ ಅಹ್ಮದ್ ಬಾಂಬೆ ಸೇಠ್, ಜೆಡಿಎಸ್ ಮುಖಂಡ ನಾಸಿರ್ ಹುಸೇನ್ ಉಸ್ತಾದ್, ಕಾಂಗ್ರೆಸ್ ಮುಖಂಡ ರವಿ ಭೋಸರಾಜ್,
ಸೇರಿದಂತೆ ಹಲವು ವೈದ್ಯರು, ವೈದ್ಯಕೀಯ ಕ್ಷೇತ್ರದ ಗಣ್ಯರು, ಉದ್ಯಮಿಗಳು, ವ್ಯಾಪಾರಸ್ಥರು, ಸಾಮಾಜಿಕ ಮುಖಂಡರು ಹಾಗೂ ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಸಮಾರಂಭದಲ್ಲಿ ಆಸ್ಪತ್ರೆಯ ಅಧ್ಯಕ್ಷ ಡಾ. ಆರಿಫ್ ರಜಾ ಅಹ್ಮದ್ ಅವರು ಆಗಮಿಸಿದ ಸಚಿವರು, ಜನಪ್ರತಿನಿಧಿಗಳು, ಧಾರ್ಮಿಕ ಗುರುಗಳು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲ ಗಣ್ಯರು, ವೈದ್ಯರು, ಅಧಿಕಾರಿಗಳು, ಉದ್ಯಮಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಡಾ. ಆರಿಫ್ ರಜಾ ಅಹ್ಮದ್ ಮತ್ತು ಎನ್ಕೆ ಟ್ರಸ್ಟ್ ಕುಟುಂಬದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಕಲ್ಯಾಣ ಕರ್ನಾಟಕದ ಜನರಿಗೆ ಆಧುನಿಕ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಆರಂಭಗೊಂಡಿರುವ ಎನ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಈ ಭಾಗದ ಆರೋಗ್ಯ ಸೇವಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಮೂಡಿಸಿದೆ.

