ಮಹರ್ಷಿ ವಾಲ್ಮೀಕಿಯವರ ಆದರ್ಶಗಳು ಸಮಾಜಕ್ಕೆ ಸದಾ ಸ್ಫೂರ್ತಿ: ಶಿವಲಿಂಗಪ್ಪ ಕಿನ್ನೂರ್

ಮಹರ್ಷಿ ವಾಲ್ಮೀಕಿಯವರ ಆದರ್ಶಗಳು ಸಮಾಜಕ್ಕೆ ಸದಾ ಸ್ಫೂರ್ತಿ: ಶಿವಲಿಂಗಪ್ಪ ಕಿನ್ನೂರ್

ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

ಮಹರ್ಷಿ ವಾಲ್ಮೀಕಿಯವರ ಆದರ್ಶಗಳು ಸಮಾಜಕ್ಕೆ ಸದಾ ಸ್ಫೂರ್ತಿ: ಶಿವಲಿಂಗಪ್ಪ ಕಿನ್ನೂರ್

ಕಲಬುರಗಿ: ರಾಷ್ಟ್ರೀಯ ಸಮಾಜ ಪಕ್ಷದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಇಂದು ಕಲಬುರಗಿ ನಗರದ ಪಕ್ಷದ ಕಾರ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ್ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯವನ್ನು ರಚಿಸುವ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಜೀವನ ಮತ್ತು ಆದರ್ಶಗಳು ಸಮಾಜಕ್ಕೆ ಸದಾ ಮಾರ್ಗದರ್ಶಿಯಾಗಿದ್ದು, ಪ್ರತಿಯೊಬ್ಬರೂ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜದಲ್ಲಿ ಸಮಾನತೆ, ಸಹೋದರತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ರಾಷ್ಟ್ರೀಯ ಸಮಾಜ ಪಕ್ಷದ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಮಂತ ಮಾವನೂರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸಪ್ಪ ದೊಡ್ಡಮನಿ, ಸಿದ್ದರಾಜು ಕಿನ್ನೂರು, ಉಪಾಧ್ಯಕ್ಷರಾದ ಅಯ್ಯಪ್ಪ ಸಿಂದಗಿ, ಜೇವರ್ಗಿ ತಾಲೂಕು ಅಧ್ಯಕ್ಷರಾದ ಮಹಾಂತೇಶ ದೊಡ್ಡಮನಿ, ಗುರು ಹೂಗಾರ್, ಚಂದ್ರಶೇಖರ್ ತಳವಾರ್, ಧರ್ಮಣ್ಣ ಪೂಜಾರಿ,ಆಕಾಶ್ ಶಹಾಬಾದ್, ಭಾರತ ಶೋಲಾಪುರ ರಮೇಶ ಕಣಮೇಶ್ವರ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

— ರಾಷ್ಟ್ರೀಯ ಸಮಾಜ ಪಕ್ಷ, ಕಲಬುರಗಿ ಜಿಲ್ಲಾ ಘಟಕ