ಬಾಲ್ಯವಿವಾಹ ಮುಕ್ತ ಕಲಬುರಗಿ ಅಭಿಯಾನದ ಪೋಸ್ಟರ್ ಬಿಡುಗಡೆ
ಬಾಲ್ಯವಿವಾಹ ಮುಕ್ತ ಕಲಬುರಗಿ ಅಭಿಯಾನದ ಪೋಸ್ಟರ್ ಬಿಡುಗಡೆ
ಕಲಬುರಗಿ: ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಬಾಲ್ಯವಿವಾಹ ಮುಕ್ತ ಕಲಬುರಗಿ’ 100 ದಿನಗಳ ಅಭಿಯಾನದ ಪೋಸ್ಟರ್ನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ. ಖಾದರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕಿರಣ್ ದೇಶಮುಖ, ಕಾಂಗ್ರೆಸ್ ಮುಖಂಡ ಲಾಲ್ ಅಹಮದ್ ಬಾಂಬೆ ಸೇಠ, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.
ಸಚಿವ ಯು.ಟಿ. ಖಾದರ್ ಅವರು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಾಲ್ಯವಿವಾಹ ಮುಕ್ತ ಕಲಬುರಗಿ ಅಭಿಯಾನಕ್ಕೆ ಚಾಲನೆ ನೀಡಿದರು.

