ಕರ್ನಾಟಕ ಮಹಿಳಾ ಪರ ಜನಜಾಗೃತಿ ಸಮಿತಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಾಗಮಣಿ ಎಸ್. ತೆಗನೂರ ನೇಮಕ

ಕರ್ನಾಟಕ ಮಹಿಳಾ ಪರ ಜನಜಾಗೃತಿ ಸಮಿತಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಾಗಮಣಿ ಎಸ್. ತೆಗನೂರ ನೇಮಕ

ಕರ್ನಾಟಕ ಮಹಿಳಾ ಪರ ಜನಜಾಗೃತಿ ಸಮಿತಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಾಗಮಣಿ ಎಸ್. ತೆಗನೂರ ನೇಮಕ

ಕಲಬುರಗಿ: ಕರ್ನಾಟಕ ಮಹಿಳಾ ಪರ ಜನಜಾಗೃತಿ ಸಮಿತಿಯ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಾಗಮಣಿ ಎಸ್. ತೆಗನೂರ ಅವರನ್ನು ನೇಮಕ ಮಾಡಲಾಗಿದೆ.

ಸಮಿತಿಯ ರಾಜ್ಯಾಧ್ಯಕ್ಷೆ ಜಗದೇವಿ ಆರ್. ಹೆಗಡೆ ಅವರ ಆದೇಶದ ಮೇರೆಗೆ ರಾಜ್ಯ ಸಮಿತಿಯ ಕಾರ್ಯಕಾರಿ ಸಮಿತಿಯ ಅನುಮೋದನೆಯೊಂದಿಗೆ ನಾಗಮಣಿ ಎಸ್. ತೆಗನೂರು ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿ ತಿಳಿಸಿದೆ.

ಮಹಿಳೆಯರ ಮೇಲೆ ನಡೆಯುವ ಅನ್ಯಾಯ, ಅತ್ಯಾಚಾರ, ಶೋಷಣೆ ಹಾಗೂ ದೌರ್ಜನ್ಯಗಳ ವಿರುದ್ಧ ಹೋರಾಟ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ಸಮಿತಿಯ ಮುಖ್ಯ ಉದ್ದೇಶವಾಗಿದೆ. ಅಲ್ಲದೆ, ಸಂಘಟನೆಯನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಬಲಪಡಿಸಿ, ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೂತನ ಪದಾಧಿಕಾರಿಗೆ ರಾಜ್ಯಾಧ್ಯಕ್ಷೆ ಜಗದೇವಿ ಆರ್. ಹೆಗಡೆ ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮಹಿಳೆಯರ ಹಕ್ಕುಗಳ ರಕ್ಷಣೆ ಹಾಗೂ ಅವರ ಮೇಲಿನ ದೌರ್ಜನ್ಯಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ಆದ್ಯತೆ ನೀಡುವಂತೆ ತಿಳಿಸಿದ್ದಾರೆ.