ಆರ್.ಜಿ. ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ
ಆರ್.ಜಿ. ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ
ಬಸವಕಲ್ಯಾಣ: ಆರ್.ಜಿ. ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾದ ಧನರಾಜ ರಾಜೋಳೆ ಮಾತನಾಡಿ , ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯ ಮಹತ್ವವನ್ನು ತಿಳಿಸಿದರು. ಕನ್ನಡ ಭಾಷೆಯು ನಮ್ಮ ಹೆಮ್ಮೆಯ ಗುರುತಾಗಿದ್ದು, ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಗೌರವಿಸಬೇಕು ಹಾಗೂ ಕನ್ನಡದಲ್ಲಿ ಮಾತನಾಡಲು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಶಾಲೆಯ ಅಧ್ಯಕ್ಷರಾದ ಜಿಯಾಯೊದ್ದೀನ್ ನೀಲಂಗೆಕರ್ ಮಾತನಾಡಿ, ಕನ್ನಡ ಭಾಷೆಯ ಗೌರವ ಮತ್ತು ಅದರ ಬಳಕೆಯನ್ನು ಹೆಚ್ಚಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಸುಹಾಸಿನಿ ಗುರಣ್ಣ ಅವರು ಮಾತನಾಡಿ, . ವಿದ್ಯಾರ್ಥಿಗಳು ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಗೌರವಿಸುವುದರ ಜೊತೆಗೆ ಕನ್ನಡದ ಉಳಿವು ಮತ್ತು ಬೆಳವಣಿಗೆಯಲ್ಲಿ ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಟ್ರಸ್ಟಿ, ರೆಹಫತ್ ಕಹಕಶಾ, ಶಿಕ್ಷಕಿ ಭಾಗ್ಯ ನಿರೂಪಿಸಿದರು.

