ನಮ್ಮ ಕರ್ನಾಟಕ ಸೇನೆಯಿಂದ ತಾಯಿ ಭುವನೇಶ್ವರಿ ಪೂಜೆ
ನಮ್ಮ ಕರ್ನಾಟಕ ಸೇನೆಯಿಂದ ತಾಯಿ ಭುವನೇಶ್ವರಿ ಪೂಜೆ
ಕಲಬುರಗಿ: 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಕಲಬುರಗಿ ನಗರದ ಕಚೇರಿಯಲ್ಲಿ ತಾಯಿ ಭುವನೇಶ್ವರಿ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಕನ್ನಡದ ಅಭಿಮಾನವನ್ನು ಮೆರೆದು, ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಕನ್ನಡ ಭಾಷೆಯ ಮಹತ್ವವನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ನಗರ ಘಟಕದ ಅಧ್ಯಕ್ಷ ಸುರೇಶ್ ಜಿ. ಹೂಸಮನಿ ಹಾಗೂ ಯುವ ಘಟಕದ ಅಧ್ಯಕ್ಷ ಸಾಗರ್ ಅಭಿಷಾಳ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

