ವಿದ್ಯಾರ್ಥಿಗಳಿಗೆ ಸಾಧಿಸುವ ಛಲ ಇರಲಿ --

ವಿದ್ಯಾರ್ಥಿಗಳಿಗೆ ಸಾಧಿಸುವ ಛಲ ಇರಲಿ --

ವಿದ್ಯಾರ್ಥಿಗಳಿಗೆ ಸಾಧಿಸುವ ಛಲ ಇರಲಿ

ನರೇಗಲ್: ಮನಸ್ಸಿದ್ದರೆ ಮಾರ್ಗ ಎಂಬ ಗಾದೆಯಂತೆ ಸಾಧಿಸಲೇಬೇಕೆಂಬ ಹಠ ಮತ್ತು ಛಲವಿದ್ದರೆ ಎಂತಹ ಕಠಿಣ ಗುರಿಯನ್ನೂ ಸುಲಭವಾಗಿ ತಲುಪಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಮೇಲ್ವಿಚಾರಕರಾದ ಪ್ರಭಾಕರ ಚಲವಾದಿ ಹೇಳಿದರು.

 ನರೇಗಲ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದ 7ನೇ ತರಗತಿ ವಿದ್ಯಾರ್ಥಿ ಅನಿಕೇತ್ ದುರಗಪ್ಪ ಹರಿಜನ ಇವರು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿನ್ನಲೆಯಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಾಸ್ಟೆಲ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಮಾತನಾಡಿದರು. 

 ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ವಸತಿ ನಿಲಯಗಳ ಮೂಲಕ ಉತ್ತಮ ಸೌಲಭ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ತಮ್ಮ ಪ್ರತಿಭೆಯ ಮೂಲಕ ಪಾಲಕರಿಗೆ, ಶಾಲೆಗೆ ಹಾಗೂ ಹಾಸ್ಟೆಲ್‌ಗೆ ಕೀರ್ತಿ ತರಬೇಕು ಎಂದರು.

 14 ವರ್ಷದೊಳಗಿನ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನಾರ್ಹ ಉತ್ತಮ ಸಾಧನೆ ಮಾಡುವ ಮೂಲಕ ಅನಿಕೇತ್‌ನ ಉಳಿದ ವಿದ್ಯಾರ್ಥಿಗಳಿಗೆ ಉತ್ತಮ ಪ್ರೇರಣೆಯಾಗಿದೆ ಆಗಿದ್ದಾನೆ ಎಂದು ಶ್ಲಾಘಿಸಿದರು. 

ಈ ವೇಳೆ ಹಾಸ್ಟೆಲ್‌ ಸಿಬ್ಬಂದಿಗಳಾದ ಸುರೇಶ ಮಾದರ, ಸರೋಜಾ ಲಮಾಣಿ, ಸುಜಾತ ಉಪ್ಪಾರ, ವಿದ್ಯಾರ್ಥಿಗಳು ಇದ್ದರು.

ನರೇಗಲ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯದ 7ನೇ ತರಗತಿ ವಿದ್ಯಾರ್ಥಿ ಅನಿಕೇತ್ ದುರಗಪ್ಪ ಹರಿಜನ ಇವರು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿನ್ನಲೆಯಲ್ಲಿ ಹಾಸ್ಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು

ಜಿಲ್ಲಾ ವರದಿಗಾರರು ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ