ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.14.25 ರಿಂದ 15.75ಕ್ಕೆ ಹೆಚ್ಚಳ
ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.14.25 ರಿಂದ 15.75ಕ್ಕೆ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರ ತುಟ್ಟಿಭತ್ಯೆ (ಡಿಎ) ದರವನ್ನು ಶೇ.14.25ರಿಂದ ಶೇ.15.75ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಗಳ ಮೂಲಕ ಈ ಆದೇಶ ಹೊರಡಿಸಲಾಗಿದ್ದು, 2026ರ ಜನವರಿ 1ರಿಂದಲೇ ಪರಿಷ್ಕೃತ ತುಟ್ಟಿಭತ್ಯೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕಾರದ ಆದೇಶವನ್ನು ಪಿಡಿಎಫ್ ಇದೆ ತಾವು ಡೌನ್ಲೋಡ್ ಮಾಡಿಕೊಂಡು ನೋಡಬಹುದು.

