ಶಾಯಿಬಾಬಾ ಅಣಬಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಶಾಯಿಬಾಬಾ ಅಣಬಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಶಹಪುರ : ತಾಲೂಕಿನ ಅಣಬಿ ಗ್ರಾಮದ ಯುವ ಸಾಹಿತಿ,ಸಂಶೋಧಕ ಶಾಯಿಬಾಬಾ ಅಣಬಿಯವರಿಗೆ ರಾಯಚೂರಿನ ಕಲಾ ಸಂಕುಲ ಸಂಸ್ಥೆ ವತಿಯಿಂದ ಕೊಡ ಮಾಡುವ 2026 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷ ರೇಖಾ ಬಡಿಗೇರ್ ಪ್ರಕಟಣೆಗೆ ತಿಳಿಸಿದ್ದಾರೆ.
ಇವರು ಸಾಹಿತ್ತಿಕವಾಗಿ ಸಾಂಸ್ಕೃತಿಕವಾಗಿ ಗುರುತಿಸಿಕೊಂಡಿರುವುದರ ಜೊತೆಗೆ ಹಲವಾರು ಕೃತಿಗಳನ್ನು ಈ ನಾಡಿಗೆ ಪರಿಚಯಿಸಿದ್ದಾರೆ, ಅವರ ಅಮೋಘ ಸಾಧನೆಯನ್ನು ಗುರುತಿಸಿ ಕಲಾ ಸಂಕುಲ ಸಂಸ್ಥೆ ರಾಯಚೂರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ನವಂಬರ್ 8 ರಂದು ರಾಯಚೂರಿನ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಆಯೋಜಿಸಿದ ದೇಸಿ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರಗುವುದು ಎಂದು ತಿಳಿಸಿದ್ದಾರೆ.ಸಾಹಿತಿ ಶಾಯಿಬಾಬಾ ಅಣಬಿ ಅವರ ಸ್ನೇಹಿತರು ಹಿತೈಷಿಗಳು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

