ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಕಾಕೋಳು ಶಾಲೆಯ ಅದ್ವಿಕಾಗೆ ಪ್ರಥಮ ಸ್ಥಾನ
ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಕಾಕೋಳು ಶಾಲೆಯ ಅದ್ವಿಕಾಗೆ ಪ್ರಥಮ ಸ್ಥಾನ
ಬೆಂಗಳೂರು: ತಾಲೂಕು ಮಟ್ಟದ ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಬೆಂಗಳೂರು ಉತ್ತರ ವಲಯ-4ರ ವ್ಯಾಪ್ತಿಯ ಎಲ್ಲಾ ಕ್ಲಸ್ಟರ್ಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಸ್ಪರ್ಧೆಯಲ್ಲಿ ಕಾಕೋಳು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅದ್ವಿಕಾ ಆರ್. ಅವರು ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ತಮ್ಮ ಸೃಜನಶೀಲ ಬರವಣಿಗೆ ಹಾಗೂ ಪ್ರತಿಭೆಯ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ ಅದ್ವಿಕಾ ಅವರು ಇದೀಗ ಬೆಂಗಳೂರು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡಿದ ಶಿಕ್ಷಕರ ಕಾರ್ಯವನ್ನೂ ಶ್ಲಾಘಿಸಿದ್ದಾರೆ. ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಅದ್ವಿಕಾ ಅವರು ಉತ್ತಮ ಸಾಧನೆ ಮಾಡಿ ಶಾಲೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಪಾಂಚಜನ್ಯ ಪ್ರತಿಷ್ಠಾನದ ಸಂಸ್ಥಾಪಕ ಟ್ರಸ್ಟಿ ಮುರಳಿ ಕಾಕೋಳು ಶುಭ ಹಾರೈಸಿದ್ದಾರೆ.

