ಡಾ. ಜಾಫರ್ ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಡಾ. ಜಾಫರ್ ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಡಾ. ಜಾಫರ್ ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ.

ಯಡ್ರಾಮಿ : ತಾಲೂಕಿನ ಮಳ್ಳಿ ಗ್ರಾಮದ ವೈದ್ಯರು ಹಾಗೂ ಸಮಾಜ ಸೇವಕರಾದ ಡಾ. ಜಾಫರ್ ಷರೀಫ್ ನಿಡಗುಂದಿ ಅವರಿಗೆ ರಾಯಚೂರಿನ ಕಲಾ ಸಂಕುಲ ಸಂಸ್ಥೆ ವತಿಯಿಂದ ಕೊಡ ಮಾಡುವ 2026 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು 

ಇವರ ಸುಮಾರು ವರ್ಷಗಳ ವೈದ್ಯಕೀಯ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಹಾಗೂ ಅವರ ಅಮೋಘ ಸಾಧನೆಯನ್ನು ಗುರುತಿಸಿ ಕಲಾ ಸಂಕುಲ ಸಂಸ್ಥೆ ರಾಯಚೂರು ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರವಿವಾರ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಕಾರ್ಯದರ್ಶಿ ಶ್ರೀದೇವಿ ನಾಯಕ,ಚಿತ್ರನಟಿ ಡಾ.ಪೂಜಾ ರಮೇಶ್,ಕಾಂಗ್ರೆಸ್ ಮುಖಂಡ ಅಸ್ಲಾಂ ಪಾಷಾ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ, ಶಿವಶಂಕರ,ಕಲಾಸಂಕುಲ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು,