ಪ್ರತಿಭಾ ಕಾರಂಜಿ:ತಾಲೂಕು ಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿ:ತಾಲೂಕು ಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿ:ತಾಲೂಕು ಮಟ್ಟಕ್ಕೆ ಆಯ್ಕೆ

ಶಹಪುರ : ತಾಲೂಕಿನ ಸಗರ ಗ್ರಾಮದ ಕಾವೇರಿ ವಿದ್ಯಾ ಮಂದಿರ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಗುರುಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಸಗರ ಗ್ರಾಮದ ಸುಬೇದಾರ ವಿದ್ಯಾಲಯದಲ್ಲಿ ಆಯೋಜಿಸಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ 16 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಾದ ಕನ್ನಡ ಕಂಠಪಾಠ, ಇಂಗ್ಲಿಷ್ ಕಂಠಪಾಠ,ಧಾರ್ಮಿಕ ಪಠಣ ಸಂಸ್ಕೃತ,ದೇಶಭಕ್ತಿ ಗೀತೆ, ಮಿಮಿಕ್ರಿ,ಛೆದ್ಮವೇಶ,ಭಕ್ತಿ ಗೀತೆ, ಸ್ಕೈ ಮಾಡಲಿಂಗ್,ಆಶುಭಾಷಣ ಕವನ ವಾಚನ, ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಕ್ಕಳಲ್ಲಿರುವ ಅಭಿರುಚಿ ಸಾಹಿತ್ಯಾಸಕ್ತಿ ಹಾಗೂ ಪ್ರತಿಭೆಯನ್ನು ಹೊರ ತರುವುದಕ್ಕೆ ಇದು ಸೂಕ್ತ ವೇದಿಕೆಯಾಗಿದ್ದು,ಮುಂದಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಇದು ಪೂರಕವಾಗಲಿದೆ ಅಲ್ಲದೆ ಮುಂದಿನ ಪ್ರತಿಭೆ ಅನಾವರಣ ಗೊಳಿಸುವುದಕ್ಕೆ ಸೂಕ್ತ ಮಾರ್ಗದರ್ಶನ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ದೇವೇಂದ್ರಪ್ಪ ಹಡಪದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.