ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಇಸ್ಮಾಯಿಲ್ ಮುಲಗೆ ಆಗ್ರಹ

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಇಸ್ಮಾಯಿಲ್ ಮುಲಗೆ ಆಗ್ರಹ

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಇಸ್ಮಾಯಿಲ್ ಮುಲಗೆ ಆಗ್ರಹ

ಕಲಬುರಗಿ, ನ. 13: 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ಆಗುತ್ತಿರುವ ತಾರತಮ್ಯವನ್ನು ಸರಿಪಡಿಸಿ, ಅರ್ಹ ರೈತರಿಗೆ ನ್ಯಾಯ ಒದಗಿಸಬೇಕೆಂದು ಕಲಬುರಗಿ ಜಿಲ್ಲೆಯ ರೈತ ಮುಖಂಡರು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು 13-11-2026ರಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿರುವ ರೈತ ಮುಖಂಡರು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ರೈತರು ತಮ್ಮ ಜಮೀನುಗಳಲ್ಲಿ ವಿವಿಧ ಬೆಳೆಗಳ, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬೆಳೆ ವಿಮೆ ಪರಿಹಾರ ನೀಡುವಲ್ಲಿ ವಿಮಾ ಕಂಪನಿಗಳು ಅನುಸರಿಸುತ್ತಿರುವ ಮಾನದಂಡಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರು ಬೆಳೆ ವಿಮೆ ಪಾವತಿಸುವ ಸಂದರ್ಭದಲ್ಲಿ ಯಾವುದೇ ಆಕ್ಷೇಪ ವ್ಯಕ್ತಪಡಿಸದ ವಿಮಾ ಕಂಪನಿಯವರು, ಪರಿಹಾರ ನೀಡುವ ಸಮಯದಲ್ಲಿ ಮಾತ್ರ ವಿವಿಧ ನೆಪಗಳನ್ನು ಮುಂದಿಟ್ಟು ಕಡಿಮೆ ಪರಿಹಾರ ನೀಡಲು ಮುಂದಾಗಿರುವುದು ಖಂಡನೀಯ. ಕೃಷಿ ಅಧಿಕಾರಿಗಳ ಸಮೀಕ್ಷೆಯ ಪ್ರಕಾರ ಶೇ.90ರಷ್ಟು ಬೆಳೆ ನಷ್ಟವಾಗಿದ್ದರೂ, ವಿಮಾ ಕಂಪನಿಯ ಸಮೀಕ್ಷೆಯ ಆಧಾರದ ಮೇಲೆ ಕೇವಲ ಶೇ.45ರಷ್ಟು ವಿಮಾ ಪರಿಹಾರ ನೀಡಲು ಮುಂದಾಗಿರುವುದು ರೈತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದರು 

ಬರ ಪರಿಸ್ಥಿತಿಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರ ಬದುಕು ಮತ್ತಷ್ಟು ದುಸ್ಥಿತಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ವಿಮಾ ಕಂಪನಿಯವರು ಸಮರ್ಪಕವಾಗಿ ಬೆಳೆ ನಷ್ಟದ ಸಮೀಕ್ಷೆ ನಡೆಸದೆ ಕಡಿಮೆ ಪರಿಹಾರ ನೀಡುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಆತಂಕವಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸಂಬಂಧಪಟ್ಟ ವಿಮಾ ಕಂಪನಿಯ ಮೇಲೆ ಒತ್ತಡ ಹೇರಿ, ಕೃಷಿ ಇಲಾಖೆಯ ಸಮೀಕ್ಷೆಯ ಆಧಾರದ ಮೇಲೆ ಅರ್ಹ ರೈತರಿಗೆ ನ್ಯಾಯಯುತ ಬೆಳೆ ವಿಮೆ ಪರಿಹಾರ ದೊರಕಿಸಿಕೊಡಬೇಕು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಹೇಳಿದರು.

ಮಲ್ಲಿಕಾರ್ಜುನ ಸಾವಳಗಿ,ರಮೇಶ ಕನಗೊಂಡ,ಪರಣಪ್ಪ ಕೊತಲಿ,ಸಿದ್ರಾಮ ಚಟ್ಟಿ,ಶಿವಲಿಂಗಪ್ಪ ಸಾವಳಗಿ ಉಪಸ್ಥಿತರಿದ್ದರು