ಶಾಲೆಗಳ ಮಾನ್ಯತೆ ನವೀಕರಣಕ್ಕೆ ಏಕಗವಾಕ್ಷಿ ವ್ಯವಸ್ಥೆ ಸೇರಿದಂತೆ ಏಳು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ದಿಂಡೂರ ಒತ್ತಾಯ

ಶಾಲೆಗಳ ಮಾನ್ಯತೆ ನವೀಕರಣಕ್ಕೆ ಏಕಗವಾಕ್ಷಿ ವ್ಯವಸ್ಥೆ ಸೇರಿದಂತೆ ಏಳು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ದಿಂಡೂರ ಒತ್ತಾಯ

ಖಾಸಗಿ ಶಾಲೆಗಳ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ರುಪ್ಸಾ ಆಗ್ರಹ

ಶಾಲೆಗಳ ಮಾನ್ಯತೆ ನವೀಕರಣಕ್ಕೆ ಏಕಗವಾಕ್ಷಿ ವ್ಯವಸ್ಥೆ ಸೇರಿದಂತೆ ಏಳು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ದಿಂಡೂರ ಒತ್ತಾಯ

ಕಲಬುರಗಿ: ರಾಜ್ಯದ ಅನುದಾನರಹಿತ ಖಾಸಗಿ ಶಾಲೆಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತೆ ರುಪ್ಸಾ ಕರ್ನಾಟಕ (ರಿ.) ಸಂಘದ ಅಧ್ಯಕ್ಷ ಶಶಿಧರ ದಿಂಡೂರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು ನವೆಂಬರ 11ರಂದು ಕಲಬುರಗಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಯವರಿಗೆ ಮನವಿ ಮಾಡಿರುವ ರುಪ್ಸಾ ಕರ್ನಾಟಕ ಸಂಘವು, ಖಾಸಗಿ ಶಾಲೆಗಳ ಸಮಸ್ಯೆಗಳ ಕುರಿತು ಸಾರ್ವಜನಿಕರ ಹಾಗೂ ಸರ್ಕಾರದ ಗಮನ ಸೆಳೆಯಲು ಮುಂದಾಗಿದೆ ಎಂದು ಹೇಳಿದರು 

ರಾಜ್ಯದ ಖಾಸಗಿ ಶಾಲೆಗಳು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದು, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಹಾಗೂ ಶಾಲೆಗಳ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿವೆ. ಆದರೆ ಮಾನ್ಯತೆ ನವೀಕರಣ, ಆಡಳಿತಾತ್ಮಕ ನಿಯಮಗಳು, ಆರ್ಥಿಕ ಸಮಸ್ಯೆಗಳು ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಿವೆ ಎಂದು ಹೇಳಿದರು 

ಸಂಘದ ಪ್ರಮುಖ ಬೇಡಿಕೆಗಳು:

1. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು.

2. ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಬೇಕು.

3. ಖಾಸಗಿ ಶಾಲೆಗಳ ಸುಧಾರಣೆಗೆ ಸಂಬಂಧಿಸಿದ ವಿಧಾನಸಭಾ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಆದ್ಯತೆಯಾಗಿ ಅನುಷ್ಠಾನಗೊಳಿಸಬೇಕು.

4. ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವ ಮಕ್ಕಳಿಗೆ ಸಂಬಂಧಿಸಿದ ಶುಲ್ಕ ಮರುಪಾವತಿ ಹಾಗೂ ಬಾಕಿ ಮೊತ್ತವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು.

5. ಶಾಲಾ ದತ್ತು ಯೋಜನೆಯನ್ನು ಬಲಪಡಿಸಿ, ಶಾಲೆಗಳ ಸ್ಥಿತಿ, ಸಂರಕ್ಷಣೆ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು.

6. ಶೇ. 7.5ರ ಗ್ರಾಮೀಣ ಕೃಪಾಂಕಕ್ಕೆ ಸಂಬಂಧಿಸಿದ ನಿಯಮ ತಿದ್ದುಪಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.

7. ಪೋಷಕರ ಸಭೆಗಳನ್ನು ನಿಯಮಿತವಾಗಿ ನಡೆಸಲು ಹಾಗೂ ಶಾಲೆ ಮತ್ತು ಪೋಷಕರ ನಡುವಿನ ಸಮನ್ವಯವನ್ನು ಬಲಪಡಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

ಖಾಸಗಿ ಶಾಲೆಗಳ ಅಭಿವೃದ್ಧಿ ಎಂದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದ್ದರಿಂದ ಸರ್ಕಾರವು ಸಂಘದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಶಾಲೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು.

ಗೋಷ್ಠಿಯಲ್ಲಿ , ಜಿ ಎಸ್.ರವಿ, ಕೊಟ್ರೇಶ್ ಜಿ.ಎಂ, ಪುರುಷೋತ್ತಮ್ ಪುರೋಹಿತ, ವಿನಯ ಪಾಟೀಲ, ರಾಘವೇಂದ್ರ ಕಡೆಮನಿ, ಸಂಗಮೇಶ ಮಂಗನವರ, ಶಿವಕುಮಾರ ಹರಲಿ ಉಪಸ್ಥಿತರಿದ್ದರು