ಚಂದ್ರಂಪಳ್ಳಿ ಜಲಾಶಯದಿಂದ ಮುಲ್ಲಾಮಾರಿ ನದಿಗೆ ನೀರು ಬಿಡಲು : ಮಾರುತಿ ಗಂಜಗೀರಿ ಒತ್ತಾಯ

ಚಂದ್ರಂಪಳ್ಳಿ ಜಲಾಶಯದಿಂದ ಮುಲ್ಲಾಮಾರಿ ನದಿಗೆ ನೀರು ಬಿಡಲು :  ಮಾರುತಿ ಗಂಜಗೀರಿ ಒತ್ತಾಯ

ಚಂದ್ರಂಪಳ್ಳಿ ಜಲಾಶಯದಿಂದ ಮುಲ್ಲಾಮಾರಿ ನದಿಗೆ ನೀರು ಬಿಡಲು : ಮಾರುತಿ ಗಂಜಗೀರಿ ಒತ್ತಾಯ

ಕಲಬುರಗಿ: ಮುಲ್ಲಾಮಾರಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ತೀವ್ರ ಸಮಸ್ಯೆ ಎದುರಾಗಿದೆ. ಆದ್ದರಿಂದ ಚಂದ್ರಂಪಳ್ಳಿ ಜಲಾಶಯದಿಂದ ಮುಲ್ಲಾಮಾರಿ ನದಿಗೆ ತಕ್ಷಣ ನೀರು ಬಿಡುಗಡೆ ಮಾಡಬೇಕೆಂದು ಮೂಲ ನಿವಾಸಿ ಕಬ್ಬು ಬೆಳೆಗಾರರ ಸಂಘಟನೆ ಚಿಂಚೋಳಿ ವತಿಯಿಂದ ಒತ್ತಾಯಿಸಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೋರ್‌ವೆಲ್‌ಗಳು ಮತ್ತು ಬಾವಿಗಳು ಬತ್ತಿ ಹೋಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಜನರು, ರೈತರು ಹಾಗೂ ಜಾನುವಾರುಗಳು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ರೈತರ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಚಂದ್ರಂಪಳ್ಳಿ ಜಲಾಶಯದಿಂದ ಮುಲ್ಲಾಮಾರಿ ನದಿಗೆ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಪ್ರಮಾಣದ ನೀರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಈ ಭಾಗದ ರೈತರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ, ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಜನರಿಗೆ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು. ಇಲ್ಲದಿದ್ದರೆ ರೈತರು ಮತ್ತು ಸಾರ್ವಜನಿಕರು ಮತ್ತಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

 ಗೋಷ್ಠಿಯಲ್ಲಿ , ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ, ರೈತ ಮುಖಂಡರಾದ ಸುಧಾಕರ ರಡ್ಡಿ ಪಾಟೀಲ, ಅನೀಲರಡ್ಡಿ ಪಾಟೀಲ, ಸಂತೋಷ ಪವಾರ, ಅಮರನಾಥ ಹೂವಿನಭಾವಿ ಹಾಗೂ ಮಹೇಶ್ ಕುಸರಂಪಳ್ಳಿ ಉಪಸ್ಥಿತರಿದ್ದರು