ಶಿವಾನಂದ ಗೋಗೇರಿ ಅವರಿಗೆ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಗೌರವ!
ಶಿವಾನಂದ ಗೋಗೇರಿ ಅವರಿಗೆ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಗೌರವ!
ನರೇಗಲ್ಲ: ಇಲ್ಲಿನ ಕೆ.ಎಸ್.ಎಸ್. ಕಾಲೇಜಿನ ಪ್ರಾಚಾರ್ಯ ಶಿವಾನಂದ ಗೋಗೇರಿ ಅವರಿಗೆ ಸಂಶೋಧನಾ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಪ್ರತಿಷ್ಠಿತ ಡಾ. ಎಂ.ಎಂ. ಕಲಬುರ್ಗಿ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಗದಗ ನಗರದ ಡಾ. ವಿ.ಬಿ. ಹಿರೇಮಠ ಮಹಾವೇದಿಕೆಯಲ್ಲಿ ಮಾಜಿ ಶಾಸಕರು ಹಾಗೂ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಿ.ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗಿದ 71ನೇ ಕನ್ನಡ ರಾಜ್ಯೋತ್ಸವ, ಅಶ್ವಿನಿ ಪ್ರಕಾಶನದ ಐದನೇ ಸಾಹಿತ್ಯ ಸಮ್ಮೇಳನ ಹಾಗೂ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಶಿವಾನಂದ ಗೋಗೇರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಾ. ವಿ.ಬಿ. ಹಿರೇಮಠ ಮೆಮೋರಿಯಲ್ (ರಿ.) ಗದಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಹಾಗೂ ಅಶ್ವಿನಿ ಪ್ರಕಾಶನ ಗದಗ ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗಣ್ಯರ ಸಮ್ಮುಖದಲ್ಲಿ ಗೋಗೇರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂದು ಅಶ್ವಿನಿ ಪ್ರಕಾಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನರೇಗಲ್ಲಿನ ಶೈಕ್ಷಣಿಕ ವಲಯಕ್ಕೆ ಹೆಮ್ಮೆಯ ಸಂಗತಿಯಾಗಿರುವ ಈ ಗೌರವಕ್ಕೆ ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷ ರವೀಂದ್ರನಾಥ ಬಿ. ದಂಡಿನ್ ಹಾಗೂ ಸಂಕೇತ ರ. ದಂಡಿನ್ ಸಂತಸ ವ್ಯಕ್ತಪಡಿಸಿದ್ದಾರೆ.
ಕನಕದಾಸ ಶಿಕ್ಷಣ ಸಮಿತಿಯ ಎಲ್ಲ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಿವಾನಂದ ಗೋಗೇರಿ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿ, ಮುಂದಿನ ಶೈಕ್ಷಣಿಕ ಹಾಗೂ ಸಂಶೋಧನಾ ಕಾರ್ಯಗಳಿಗೆ ಶುಭ ಹಾರೈಸಿದ್ದಾರೆ.
ಜಿಲ್ಲಾ ವರದಿಗಾರರು ಶ್ರೀ ಹುಚ್ಚೀರಪ್ಪ ವೀರಪ್ಪ ಈಟಿ ಕಲ್ಯಾಣ ಕಹಳೆ ಗದಗ

