ಕಲ್ಯಾಣ ಕರ್ನಾಟಕ ಗುತ್ತಿಗೆದಾರರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸರ್ಕಾರದ ವಿರುದ್ಧ ಮೊಹಿಸೀನ, ರಾಜಶೇಖರ್ ಆಕ್ರೋಶ
ಕಲ್ಯಾಣ ಕರ್ನಾಟಕ ಗುತ್ತಿಗೆದಾರರಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸರ್ಕಾರದ ವಿರುದ್ಧ ಮೊಹಿಸೀನ, ರಾಜಶೇಖರ್ ಆಕ್ರೋಶ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಗುತ್ತಿಗೆದಾರರಿಗೆ ಅನುದಾನ ಹಂಚಿಕೆ ಹಾಗೂ ಕಾಮಗಾರಿಗಳ ಹಣ ಪಾವತಿಯಲ್ಲಿ ಆಗುತ್ತಿರುವ ತಾರತಮ್ಯವನ್ನು ಸರಿಪಡಿಸುವಂತೆ ಕಲ್ಯಾಣ ಕರ್ನಾಟಕ ಗುತ್ತಿಗೆದಾರರ ಸಂಘ ಪದಾಧಿಕಾರಿ, ರಾಜಶೇಖರ ಸಿ.ನಾ ಹಾಗೂ ಮೊಹಸಿನ್ ಪಟೇಲ್ ಆಗ್ರಹಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸರ್ಕಾರ ಪ್ರತಿ ವರ್ಷ ಸುಮಾರು 5 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದ್ದರೂ, ಅದರ ಸಮರ್ಪಕ ಬಳಕೆ ಹಾಗೂ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆದಾರರು ಕಾಮಗಾರಿಗಳನ್ನು ಪೂರ್ಣಗೊಳಿಸಿದರೂ ಬಿಲ್ಗಳ ಪಾವತಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅನುದಾನದ ಸಮರ್ಪಕ ಬಳಕೆ, ಬಾಕಿ ಬಿಲ್ಗಳ ಪಾವತಿ ಹಾಗೂ ಕಾಮಗಾರಿಗಳ ಹಂಚಿಕೆಯಲ್ಲಿ ಸಮಾನ ಅವಕಾಶ ಕಲ್ಪಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸುತ್ತದೆ ಎಂದರು.
ಈ ಎಲ್ಲ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

