ಕಲಾವಿದರಿಗೆ-ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ :ಶಾಸಕ ಮತ್ತಿಮಡು.

ಕಲಾವಿದರಿಗೆ-ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ :ಶಾಸಕ ಮತ್ತಿಮಡು.

| ಗಿರಿಸಿರಿ ಸಂಗೀತ ಕಲಾ ಸಂಭ್ರಮಕ್ಕೆ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಅಧಿಕೃತ ಆಹ್ವಾನ |

ಕಲಾವಿದರಿಗೆ-ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ :ಶಾಸಕ ಮತ್ತಿಮಡು.

ಶಹಾಬಾದ : ನಗರದ ಜಗದಂಬಾ ಮಂದಿರದಲ್ಲಿ ನವೆಂಬರ್ 28ರಂದು ನಡೆಯಲಿರುವ ಗಿರಿಸಿರಿ ಸಂಗೀತ ಕಲಾ ಸಂಭ್ರಮ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದ ಉದ್ಘಾಟನೆಗೆ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಬಸವರಾಜ ಮತ್ತಿಮಡು ಅವರನ್ನು ಗಿರಿಸಿರಿ ಕಲಾ ಸಂಸ್ಥೆಯ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು.

ಶಾಸಕರ ಗೃಹ ಕಚೇರಿಗೆ ಭೇಟಿ ನೀಡಿದ ಗಿರಿಸಿರಿ ಕಲಾ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸ್ವಾಗತ ಸಮಿತಿಯ ಸದಸ್ಯರು ಶಾಸಕರನ್ನು ಸನ್ಮಾನಿಸಿ, ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಗೌರವಾನ್ವಿತ ಉಧ್ಘಾಟಕರಾಗಿ ಆಗಮಿಸುವಂತೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಆಹ್ವಾನ ಸ್ವೀಕರಿಸಿ ಮಾತನಾಡಿದ, ಶಾಸಕ ಬಸವರಾಜ ಮತ್ತಿಮಡು ಅವರು, ಕಲೆ, ಸಂಗೀತ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಕಲಾವಿದರನ್ನು ಗುರುತಿಸಿ ಹಾಗೆ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಕಲಾವಿದರಿಗೆ ಮತ್ತಷ್ಟು ಪ್ರೋತ್ಸಾಹ ನೀಡುವುದರ ಜೊತೆಗೆ ಹೊಸ ಪ್ರತಿಭೆಗಳು ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆಯಾಗುತ್ತವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗಿರಿಸಿರಿ ಕಲಾ ಸಂಸ್ಥೆಯು ಸಂಗೀತ, ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ನವೆಂಬರ್ 28ರಂದು ನಡೆಯಲಿರುವ ಸಂಗೀತ ಕಲಾ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಯಶಸ್ವಿಯಾಗಿ ಜರುಗಲಿ. ಕಾರ್ಯಕ್ರಮಕ್ಕೆ ಶುಭವಾಗಲಿ ಎಂದು ಹಾರೈಸಿದರು.

ಗಿರಿಸಿರಿ ಕಲಾ ಸಂಸ್ಥೆಯ ವತಿಯಿಂದ ಆಯೋಜಿಸಲಾಗುತ್ತಿರುವ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ರಾಜ್ಯಮಟ್ಟದ ಪ್ರಶಸ್ತಿಗಳ ಮೂಲಕ ಗೌರವಿಸುವ ಉದ್ದೇಶ ಹೊಂದಲಾಗಿದೆ. ಸಂಗೀತ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಕಲಾವಿದರ ಸಮಾಗಮಕ್ಕೆ ಈ ಕಾರ್ಯಕ್ರಮ ವೇದಿಕೆಯಾಗಲಿದೆ.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್. ನಿಂಗಪ್ಪ ಹುಳಗೋಳಕರ ಹಾಗೂ ಸಮಾರಂಭದ ಅಧ್ಯಕ್ಷರಾದ ಪತ್ರಕರ್ತ ಲೋಹಿತ ಡಿ. ಕಟ್ಟಿ ಉಪಸ್ಥಿತರಿದ್ದರು.