ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳ ಮೇಜರ್ ಸರ್ಜರಿ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ
ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳ ಮೇಜರ್ ಸರ್ಜರಿ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನ.18ರಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೊರಡಿಸಿರುವ ಅಧಿಸೂಚನೆಯಂತೆ ಹಲವು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಹೊಸ ಜವಾಬ್ದಾರಿ ವಹಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಉಮೇಶ್ ಕುಮಾರ್ ಸಿಂಗ್ ಅವರಿಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಜವಾಬ್ದಾರಿ ನೀಡಲಾಗಿದೆ.
ಎಂ.ಎ. ಸಲೀಂ ಅವರಿಗೆ ಬೆಂಗಳೂರು ಸಂಚಾರ ವಿಭಾಗದ ಪೊಲೀಸ್ ಆಯುಕ್ತರ ಜವಾಬ್ದಾರಿ ನೀಡಲಾಗಿದ್ದು, ಪೊಲೀಸ್ ಸಂಪರ್ಕ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಮನೀಶ್ ಖರ್ಬಿಕರ್ ಅವರನ್ನು ನೇಮಿಸಲಾಗಿದೆ.
ಇದಲ್ಲದೆ, ಬೆಂಗಳೂರು ನಗರದಲ್ಲಿ ಹೊಸದಾಗಿ ರಚಿಸಲಾದ ಕೇಂದ್ರ, ಪಶ್ಚಿಮ ಹಾಗೂ ಉತ್ತರ ವಿಭಾಗಗಳ ಪೊಲೀಸ್ ಆಯುಕ್ತರ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳಿಗೂ ವರ್ಗಾವಣೆ ಹಾಗೂ ಹೊಸ ಜವಾಬ್ದಾರಿಗಳನ್ನು ವಹಿಸಲಾಗಿದೆ.
ಈ ವರ್ಗಾವಣೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶಿಸಿದೆ.
ಸರ್ಕಾರದ ಆದೇಶದ ಪಿಡಿಎಫ್ ಇದೆ ನೋಡಿ

