ಪ್ರತಿ ಟನ್ ಕಬ್ಬಿಗೆ ₹4,000 ದರ ನಿಗದಿಗೆ ಆಗ್ರಹಿಸಿ ಆಣದೂರಿನಲ್ಲಿ ಬೃಹತ್ ರಸ್ತೆ ತಡೆ ಪ್ರತಿಭಟನೆ

ಪ್ರತಿ ಟನ್ ಕಬ್ಬಿಗೆ ₹4,000 ದರ ನಿಗದಿಗೆ ಆಗ್ರಹಿಸಿ ಆಣದೂರಿನಲ್ಲಿ ಬೃಹತ್ ರಸ್ತೆ ತಡೆ ಪ್ರತಿಭಟನೆ

ಪ್ರತಿ ಟನ್ ಕಬ್ಬಿಗೆ ₹4,000 ದರ ನಿಗದಿಗೆ ಆಗ್ರಹಿಸಿ ಆಣದೂರಿನಲ್ಲಿ ಬೃಹತ್ ರಸ್ತೆ ತಡೆ ಪ್ರತಿಭಟನೆ

ಬೀದರ್: ಜಿಲ್ಲೆಯ ಬೀದರ್ ತಾಲೂಕಿನ ಆಣದೂರು ಗ್ರಾಮದಲ್ಲಿ ಪ್ರತಿ ಟನ್ ಕಬ್ಬಿಗೆ ₹4,000 ದರ ನಿಗದಿಪಡಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರ ರೈತರು ಬೃಹತ್ ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ರೈತರ ಬೇಡಿಕೆಗಳಿಗೆ ಬೆಂಬಲ ಸೂಚಿಸಿ ಮಾತನಾಡಿದ ಸಂತೋಷ್ ರೆಡ್ಡಿ ಆಣದೂರು, ಕಬ್ಬು ಬೆಳೆಗಾರರು ಹಗಲಿರುಳು ಶ್ರಮಿಸಿ ಬೆಳೆ ಬೆಳೆದರೂ ಸೂಕ್ತ ಬೆಲೆ ಸಿಗದೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕಾದರೆ ಪ್ರತಿ ಟನ್ ಕಬ್ಬಿಗೆ ₹4,000 ದರ ನಿಗದಿಪಡಿಸಬೇಕು. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಲ್ಪಿಸಬೇಕು. ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೈತರು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ವರದಿ: ಮಚೇಂದ್ರನಾಥ ಕಾಂಬಳೆ