ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ : ಅಭಿಮಾನಿಗಳ ಸಂಭ್ರಮಾಚರಣೆ

ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ : ಅಭಿಮಾನಿಗಳ ಸಂಭ್ರಮಾಚರಣೆ

ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ : ಅಭಿಮಾನಿಗಳ ಸಂಭ್ರಮಾಚರಣೆ

ಕಲಬುರಗಿ: ಕರ್ನಾಟಕ ಸಣ್ಣ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಆಯ್ಕೆಯನ್ನು ಸ್ವಾಗತಿಸಿ, ಅವರ ಅಭಿಮಾನಿಗಳು ನಗರದ ತಿಮ್ಮಾಪುರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಅಭಿಮಾನಿಗಳು ಪರಸ್ಪರ ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದರು. ಅಲ್ಲಮಪ್ರಭು ಪಾಟೀಲ್ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಲಭಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಶ್ವಿನ ಸಂಕಾ, ಮಹಾಂತೇಶ ಪಾಟೀಲ, ರೇಣುಕಾ ಹೋಳ್ಕರ್, ಪಿಂಟು ಸ್ವಾಮಿ, ಪರಶುರಾಮ ನಾಟೀಕಾರ, ಚನ್ನು ಮರಬ್, ಅವಿನಾಶ ಬಾಸ್ಕರ್, ಮಂಜುನಾಥ ಬಿರಾದಾರ, ಶೀವಕುಮಾರ ಸ್ವಾಮಿ ಹಿರೇಮಠ, ವೇಂಕಟೇಶ ಭಜಂತ್ರಿ ಸೇರಿದಂತೆ ಅಭಿಮಾನಿ ಬಳಗದವರು ಇದ್ದರು.