ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಘಟಕಗಳ ಚುನಾವಣೆ ಸಿದ್ಧತೆ: ಚುನಾವಣಾಧಿಕಾರಿಗಳ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಘಟಕಗಳ ಚುನಾವಣೆ ಸಿದ್ಧತೆ: ಚುನಾವಣಾಧಿಕಾರಿಗಳ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಘಟಕಗಳ ಚುನಾವಣೆ ಸಿದ್ಧತೆ: ಚುನಾವಣಾಧಿಕಾರಿಗಳ ನೇಮಕ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2026ನೇ ಸಾಲಿನ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಘಟಕಗಳ ಚುನಾವಣೆಯನ್ನು ನಡೆಸಲು ರಾಜ್ಯದ ವಿವಿಧ ಜಿಲ್ಲೆಗಳಿಗೆ ಚುನಾವಣಾಧಿಕಾರಿಗಳನ್ನು ನೇಮಿಸಿ ಕನ್ನಡ ಸಾಹಿತ್ಯ ಪರಿಷತ್ತು ಆದೇಶ ಹೊರಡಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ 2021-26ನೇ ಸಾಲಿನ ಕಾರ್ಯಕಾರಿ ಸಮಿತಿಯ ಅವಧಿ ನವೆಂಬರ್ 23, 2026ಕ್ಕೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ನವೆಂಬರ್ 24ರಿಂದ ಜಾರಿಗೆ ಬರುವಂತೆ ಜಿಲ್ಲಾ ಮಟ್ಟದಲ್ಲಿ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ಬೀದರ್, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಚುನಾವಣೆ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಜಿಲ್ಲಾ, ತಾಲೂಕು ಹಾಗೂ ಹೋಬಳಿ ಘಟಕಗಳ ಸಾಂಸ್ಥಿಕ ಚಟುವಟಿಕೆಗಳನ್ನು ಸುಗಮವಾಗಿ ಮುಂದುವರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ಅಧಿಕಾರಿ ಕೆ ವಿ ದಯಾನಂದ (ಭಾಆಸೇ)ಆದೇಶದಲ್ಲಿ ತಿಳಿಸಲಾಗಿದೆ.