ರವಿ ಹಂಜ ಅವರ ಅವಹೇಳನಕಾರಿ ಹೇಳಿಕೆ ಖಂಡನೆ: ವೆಂಕಟರೆಡ್ಡಿ ಡಿ. ಪಾಟೀಲ
ರವಿ ಹಂಜ ಅವರ ಅವಹೇಳನಕಾರಿ ಹೇಳಿಕೆ ಖಂಡನೆ: ವೆಂಕಟರೆಡ್ಡಿ ಡಿ. ಪಾಟೀಲ
ಸಮುದಾಯದ ಗೌರವಕ್ಕೆ ಧಕ್ಕೆ ತರುವ ಹೇಳಿಕೆಗಳು ಸ್ವೀಕಾರಾರ್ಹವಲ್ಲ
ಬೆಂಗಳೂರು: ರವಿ ಹಂಜ ಅವರು ಜಗಜ್ಯೋತಿ ಬಸವೇಶ್ವರರ ವಿರುದ್ಧ ವ್ಯಕ್ತಪಡಿಸಿರುವ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಯುವ ಅಧ್ಯಕ್ಷ ವೆಂಕಟರೆಡ್ಡಿ ಡಿ. ಪಾಟೀಲ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರವಿ ಹಂಜ ಅವರು ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ಸಮಾಜದ ಸಮಾಜದ ಕುರಿತಾದ ಮಾತುಗಳು ನೋವುಂಟು ಮಾಡಿದೆ. ಅವರು ನೀಡಿರುವ ಅವಹೇಳನಕಾರಿ ಮಾತುಗಳು ಖಂಡನೀಯ. ಇಂತಹ ಹೇಳಿಕೆಗಳು ಸಮುದಾಯದ ಘನತೆ, ಗೌರವಕ್ಕೆ ಧಕ್ಕೆ ತರುವಂತಿದ್ದು, ಯಾವುದೇ ರೀತಿಯಲ್ಲೂ ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ.
ಸಮುದಾಯದ ಹಿರಿಯರು, ಮುಖಂಡರು ಹಾಗೂ ಗಣ್ಯ ವ್ಯಕ್ತಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಾರ್ವಜನಿಕವಾಗಿ ನಿಂದಿಸುವುದು, ಅವಹೇಳನ ಮಾಡುವುದು ಸರಿಯಾದ ಕ್ರಮವಲ್ಲ. ಸಮಾಜದಲ್ಲಿ ಪರಸ್ಪರ ಗೌರವ, ಸೌಹಾರ್ದತೆ ಮತ್ತು ಸಹಬಾಳ್ವೆ ಕಾಪಾಡುವುದು ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರವಿ ಹಂಜ ಅವರು ಸಾಮಾಜಿಕವಾಗಿ ಗೌರವಯುತವಾಗಿ ನಡೆದುಕೊಳ್ಳದೆ ಹಾಗೂ ಸಮುದಾಯದ ಜನರಿಗೆ ಅತೀವ ನೋಯಿಸಿದ್ದು, ಅವರ ಈ ಕೃತ್ಯ ಬಗ್ಗೆ ವಿರೋಧ ಹಾಗೂ ಖಂಡನೆ ಇದೆ. ಸಮಾಜದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಅವುಗಳನ್ನು ಸಭ್ಯತೆ ಮತ್ತು ಸಂಯಮದಿಂದ ವ್ಯಕ್ತಪಡಿಸಬೇಕು. ಸಮಾಜದ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳಿಂದ ದೂರವಿರಬೇಕು ಎಂದು ವೆಂಕಟರೆಡ್ಡಿ ಡಿ. ಪಾಟೀಲ ಮನವಿ ಮಾಡಿದ್ದಾರೆ.
ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

