ಶಾಲೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ತಡೆಗೆ ಜಾಗೃತಿ ಅಗತ್ಯ: ಗುರುನಾಥ್ ಹೇರೂರು

ಶಾಲೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ತಡೆಗೆ ಜಾಗೃತಿ ಅಗತ್ಯ: ಗುರುನಾಥ್ ಹೇರೂರು

ಶಾಲೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ತಡೆಗೆ ಜಾಗೃತಿ ಅಗತ್ಯ: ಗುರುನಾಥ್ ಹೇರೂರು

ಕಲಬುರಗಿ: ನಗರದ ಟಿಕೆಎಚ್ ಅನುದಾನಿತ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೈಕೋರ್ಟ್ ನ್ಯಾಯವಾದಿ ಗುರುನಾಥ್ ಹೇರೂರು, ಪೊಲೀಸ್ ಠಾಣೆಗಳು, ಶಾಲೆಗಳು ಹಾಗೂ ಹಾಸ್ಟೆಲ್‌ಗಳಲ್ಲಿ ಹೆಚ್ಚಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ಕಂಡುಬರುತ್ತಿದೆ. ಸರ್ಕಾರದಿಂದ ಮಕ್ಕಳಿಗೆ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿಯನ್ನು ಸಂಬಂಧಿಸಿದವರು ನಿರ್ವಹಿಸಬೇಕು ಎಂದು ಹೇಳಿದರು.

ವಿಶೇಷವಾಗಿ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ಹಾಗೂ ಸುರಕ್ಷತೆಯ ಕುರಿತು ಅರಿವು ಮತ್ತು ತರಬೇತಿ ನೀಡಬೇಕು. ಪ್ರತಿ ಶಾಲೆಯಲ್ಲಿಯೂ ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ಅನುಕೂಲವಾಗುವಂತೆ ಮಕ್ಕಳ ಸಹಾಯವಾಣಿ 1098 ಹಾಗೂ ತುರ್ತು ಸಹಾಯವಾಣಿ 112 ಸಂಖ್ಯೆಯನ್ನು ಮಕ್ಕಳಿಗೆ ಕಾಣುವ ಸ್ಥಳದಲ್ಲಿ ಬರೆಯಬೇಕು. ದೌರ್ಜನ್ಯ, ದೈಹಿಕ ಹಿಂಸೆ, ಕಿರುಕುಳ ಹಾಗೂ ಸರ್ಕಾರಿ ಸೌಲಭ್ಯಗಳಿಂದ ವಂಚಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯ ವ್ಯಾಪ್ತಿಗೆ ಬರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಹಾಯಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.