ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಅಂಗವಾಗಿ ಬಡವರಿಗೆ ಒಂದು ಸಾವಿರ ಸೀರೆ ವಿತರಣೆ

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಅಂಗವಾಗಿ ಬಡವರಿಗೆ ಒಂದು ಸಾವಿರ ಸೀರೆ ವಿತರಣೆ

ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಅಂಗವಾಗಿ ಬಡವರಿಗೆ ಒಂದು ಸಾವಿರ ಸೀರೆ ವಿತರಣೆ

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ನಗರದ ರಾಜಾಪುರ ಬಡಾವಣೆಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಸಿ. ಹೊನ್ನಳ್ಳಿ ಅವರ ನೇತೃತ್ವದಲ್ಲಿ ಬಡ ಮಹಿಳೆಯರಿಗೆ ಒಂದು ಸಾವಿರ ಸೀರೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕಿರಣ್ ದೇಶಮುಖ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ್ ಹರವಾಳ ಹಾಗೂ ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ್ ಮರತೂರ ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ ಬಡ ಮಹಿಳೆಯರಿಗೆ ಸೀರೆ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸುತ್ತಿರುವ ಅಶೋಕ್ ಹೊನ್ನಳ್ಳಿ ಅವರ ಕಾರ್ಯವನ್ನು ಶ್ಲಾಘಿಸಿದರು. ಮಹಾನಗರ ಪಾಲಿಕೆ ಅಧಿಕಾರಿ ಗೌತಮ್ ಕಾಂಬಳೆ, ಮಾಜಿ ಮೇಯರ್ ರವೀಂದ್ರ ಹೊನ್ನಳ್ಳಿ, ಮಾಜಿ ಪಾಲಿಕೆ ಸದಸ್ಯ ರಾಹುಲ್ ಹೊನ್ನಳ್ಳಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಂಘಪಾಲ್ ಕಾಂಬಳೆ, ಸುರೇಶ್ ನೀಲೂರ್, ಅರ್ಜುನ ಚೌದ್ರಿ ಸೇರಿದಂತೆ ಬಡಾವಣೆಯ ಮಹಿಳೆಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.