ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಗಣ್ಯರ ಕರೆ

ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಗಣ್ಯರ ಕರೆ

ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಗಣ್ಯರ ಕರೆ

ಸಂವಿಧಾನದ ಅರಿವು - ವಿದ್ಯಾರ್ಥಿಗಳಿಗೆ ಮುಕ್ತ ಸಂವಾದ ೨೦೨೬ ಕಾರ್ಯಕ್ರಮ

ಕಲಬುರಗಿ: ವಿದ್ಯಾರ್ಥಿಗಳು ಭಾರತೀಯ ಸಂವಿಧಾನದ ಮಹತ್ವ, ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಂಡು, ಸಂವಿಧಾನದ ಆಶಯಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಕರೆ ನೀಡಿದರು.

ನಗರದ ಕನ್ನಡ ಭವನದಲ್ಲಿ ಡಾ. ಅಂಬೇಡ್ಕರ್ ಅರಿವು ಉತ್ಸವ ಸಮಿತಿ, ಭಾರತೀಯ ಬೌದ್ಧ ಮಹಾಸಭಾ, ಸ್ಲಂ ಜನರ ಸಂಘಟನೆ ಕರ್ನಾಟಕ ಹಾಗೂ ಬದುಕು ಕೆರಿಯರ್ ಅಕಾಡೆಮಿ, ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನದ ಅರಿವು - ವಿದ್ಯಾರ್ಥಿಗಳಿಗೆ ಮುಕ್ತ ಸಂವಾದ ೨೦೨೬ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಸಿದ್ರಾಮಪ್ಪ ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಡಾ. ಅಂಬೇಡ್ಕರ್ ಅರಿವು ಉತ್ಸವ ಸಮಿತಿ ೨೦೨೬ರ ಅಧ್ಯಕ್ಷ ಹನುಮಂತ ಇಟಗಿ ಅವರು ಅಧ್ಯಕ್ಷತೆ ವಹಿಸಿದ್ದರು. ಡಾ. ಚಿದಾನಂದ ಕುಡನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಉಪನಿರ್ದೇಶಕ ಡಾ. ಅಂಬಾರಾಯ ಎಸ್. ರುದ್ರವಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೇಡಂನ ಪ್ರಾಧ್ಯಾಪಕ ಡಾ. ಅನಿಲ್ ಮಂಡಲ್ಕರ್, ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ. ನಿರ್ಮಲಾ ಶಿರ್ಗಾಪುರ, ಬಿಎಸ್‌ಪಿ ಜಿಲ್ಲಾ ಮುಖಂಡೆ ಶಿವಲೀಲಾ ಹಾಗೂ ದಲಿತ ಸೇನೆಯ ನಗರ ಯುವ ಘಟಕದ ಅಧ್ಯಕ್ಷ ಅರವಿಂದ ಕಮಲಾಪುರ ಅವರು ದಿಕ್ಸೂಚಿ ನುಡಿಗಳನ್ನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಪ್ರಾಂಶುಪಾಲ ಡಾ. ಐ.ಎಸ್. ವಿದ್ಯಾಸಾಗರ, ವಕೀಲ ಸೈಯದ್ ಮಜಾರ್ ಹುಸೇನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿತ್ತಾಪುರದ ಪ್ರಾಂಶುಪಾಲ ಡಾ. ಪದ್ಮಣ್ಣ ಪೂಜಾರಿ ಹಾಗೂ ಗೋದೂತಾಯಿ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಪುಟ್ಟಮಣಿ ದೇವಿದಾಸ್ ಭಾಗವಹಿಸಿದ್ದರು.

ಸಂವಾದದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಮೂಲ ಆಶಯಗಳು, ನ್ಯಾಯ, ಸ್ವಾತಂತ್ರ‍್ಯ, ಸಮಾನತೆ ಮತ್ತು ಸಹೋದರತ್ವದ ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಲು, ಸಂವಿಧಾನಕ್ಕೆ ಸಂಬAಧಿಸಿದ ಪ್ರಶ್ನೆಗಳನ್ನು ಕೇಳಲು ಹಾಗೂ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಯಿತು.

ಜಾತಿ, ಧರ್ಮ, ಭಾಷೆ ಮತ್ತು ಲಿಂಗದ ಆಧಾರದ ಮೇಲಿನ ತಾರತಮ್ಯವನ್ನು ತೊಡೆದುಹಾಕಿ ಸಮಾನತೆ, ಸಹಬಾಳ್ವೆ, ಮಾನವೀಯತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಕುರಿತು ಚರ್ಚಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಹಕ್ಕುಗಳನ್ನು ಅರಿತುಕೊಳ್ಳುವುದರ ಜೊತೆಗೆ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಪಾಲಿಸುವ ಜವಾಬ್ದಾರಿಯುತ ನಾಗರಿಕರಾಗಬೇಕು ಎಂಬ ಸಂದೇಶ ಸಾರಲಾಯಿತು.

ಕಾರ್ಯಕ್ರಮದಲ್ಲಿ ಡಾ. ಅನಿಲ್ ತೆಂಗಳಿ, ಅಲ್ಲಂಪ್ರಭು ನಿಂಬರ್ಗಾ, ಸಂತೋಷ ಪೂಜಾರಿ, ಡಾ. ಸಂದೀಪ್ ಹೋಳ್ಕರ್, ಪಂಡಿತ ಮದಗುಣಕಿ, ಮಲ್ಲಿಕಾರ್ಜುನ ಹಿಂಗೆ ಹಾಗೂ ಅಮರೇಶ ಇಟಗಿಕರ್, ಬ್ರಹ್ಮಾನಂದ ಮಿಚಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.