ರವಿ ಹಂಜ ಅವರ ಅವಹೇಳನಕಾರಿ ಹೇಳಿಕೆ ಖಂಡನೀಯ: ಶಾಂತರೆಡ್ಡಿ ಪೇಟಶಿರೂರ
ರವಿ ಹಂಜ ಅವರ ಅವಹೇಳನಕಾರಿ ಹೇಳಿಕೆ ಖಂಡನೀಯ: ಶಾಂತರೆಡ್ಡಿ ಪೇಟಶಿರೂರ
ಕಲಬುರ್ಗಿ: ರವಿ ಹಂಜ ಅವರು ಜಗಜ್ಯೋತಿ ಬಸವೇಶ್ವರರ ವಿರುದ್ಧ ವ್ಯಕ್ತಪಡಿಸಿರುವ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಕಲಬುರ್ಗಿ ನಗರ ಯುವ ಘಟಕ ಅಧ್ಯಕ್ಷ ಶಾಂತರೆಡ್ಡಿ ಪೇಟಶಿರೂರ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರವಿ ಹಂಜ ಅವರು ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ಸಮಾಜದ ಕುರಿತಾದ ಮಾತುಗಳು ನೋವುಂಟು ಮಾಡಿದೆ. ಅವರು ನೀಡಿರುವ ಅವಹೇಳನಕಾರಿ ಮಾತುಗಳು ಖಂಡನೀಯ. ಇಂತಹ ಹೇಳಿಕೆಗಳು ಸಮುದಾಯದ ಘನತೆ, ಗೌರವಕ್ಕೆ ಧಕ್ಕೆ ತರುವಂತಿದ್ದು, ಯಾವುದೇ ರೀತಿಯಲ್ಲೂ ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ.
ಸಮುದಾಯದ ಹಿರಿಯರು, ಮುಖಂಡರು ಹಾಗೂ ಗಣ್ಯ ವ್ಯಕ್ತಿಗಳ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಾರ್ವಜನಿಕವಾಗಿ ನಿಂದಿಸುವುದು, ಅವಹೇಳನ ಮಾಡುವುದು ಸರಿಯಾದ ಕ್ರಮವಲ್ಲ. ಸಮಾಜದಲ್ಲಿ ಪರಸ್ಪರ ಗೌರವ, ಸೌಹಾರ್ದತೆ ಮತ್ತು ಸಹಬಾಳ್ವೆ ಕಾಪಾಡುವುದು ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರವಿ ಹಂಜ ಅವರು ಸಾಮಾಜಿಕವಾಗಿ ಗೌರವಯುತವಾಗಿ ನಡೆದುಕೊಳ್ಳದೆ ಹಾಗೂ ಸಮಾಜದ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳಿಂದ ದೂರವಿರಬೇಕು ಎಂದು ಮನವಿ ಮಾಡಿದ್ದಾರೆ. ಸಮುದಾಯದ ಗೌರವ ಮತ್ತು ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

